ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯ ಅವುರ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಅವುರ್ಲಿ ಶಾಲೆಯಲ್ಲಿ ದಾಂಡೇಲಿ ಕಾಳಿ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಅನ್ನಪೂರ್ಣ ಚಾರಿಟೇಬಲ್ ಟ್ರಸ್ಟ್(ರಿ) ಇವುಗಳ ಸಹಯೋಗದೊಂದಿಗೆ ಮಾನವ ವನ್ಯಜೀವಿ ಸಂಘರ್ಷ ತಡೆಗಟ್ಟುವ ಹಾಗೂ ಬೆಂಕಿ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದ ಆರಂಭದಲ್ಲಿ ಅನ್ನಪೂರ್ಣ ಚಾರಿಟೇಬಲ್ ಟ್ರಸ್ಟ್ ನ ಕಲಾ ತಂಡದವರನ್ನು,ಪರಿಸರ ಅಭಿವೃದ್ಧಿ ಸಮಿತಿಯ ಅಧ್ಯಕ್ಷ,ಸದಸ್ಯರನ್ನು,ಅರಣ್ಯ ಇಲಾಖೆಯ ಉಪವಲಯ ಅರಣ್ಯಅಧಿಕಾರಿಗಳು ಅರಣ್ಯ ರಕ್ಷಕರು,ಸಾರ್ವಜನಿಕರು,ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು, ಪಣಸೋಲಿ ವನ್ಯಜೀವಿ ವಲಯದ ಅರಣ್ಯ ರಕ್ಷಕರಾದ ರೇವಣ ಸಿದ್ಧರವರು ಕಾರ್ಯಕ್ರಮಕ್ಕೆ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶ,ಮಹತ್ವ, ಸಾರ್ವಜನಿಕರಿಗೆ,ಮಕ್ಕಳಿಗೆ ಅದರ ಮಹತ್ವದ ಕುರಿತು ಪ್ರಾಸ್ತಾವಿಕ ಮಾತನಾಡಿದರು. ನಂತರ ಅವುರ್ಲಿ ಶಾಖೆಯ ಅವುರ್ಲಿ ಶಾಲೆಯಲ್ಲಿ ಅನ್ನಪೂರ್ಣ ಚಾರಿಟೇಬಲ್ ಟ್ರಸ್ಟ್ ನ ಕಲಾ ತಂಡದವರಿಂದ ಮಾನವ ವನ್ಯಜೀವಿ ಸಂಘರ್ಷ ತಡೆಗಟ್ಟುವ ಹಾಗೂ ಬೆಂಕಿ ಜಾಗೃತಿ ಕಾರ್ಯಕ್ರಮ ಕಿರು ನಾಟಕದ ಪ್ರದರ್ಶನದ ಮೂಲಕ ಉತ್ತಮ ಸಂದೇಶವನ್ನು ಮನ ಮುಟ್ಟುವ ಹಾಗೇ ಉಪಸ್ಥಿತರಿದ್ದ ಎಲ್ಲರಿಗೂ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಂ ಸಿ ಪದಾಧಿಕಾರಿಗಳ, ಶಾಲೆಯ ಮುಖ್ಯ ಶಿಕ್ಷಕರಾದ ಬೀರಪ್ಪ ಉರ್ಮಿ ಅವರ ಮಾರ್ಗದರ್ಶನಲ್ಲಿ ಅತಿಥಿ ಶಿಕ್ಷಕರಾದ ರತ್ನಾಕರ ತೆಲೋಲಿಕರ ಅವರು ಶಾಲೆಯಲ್ಲಿ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ಕಾರ್ಯಕ್ರಮದಲ್ಲಿ ಅವುರ್ಲಿ ಪರಿಸರ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಘವೇಂದ್ರ ನಾಯ್ಕ,ಉಪವಲಯ ಅರಣ್ಯಅಧಿಕಾರಿಗಳಾದ ಶಾಂತಾರಾಮ,ಶಾಲಾ ಎಸ್ ಡಿ ಎಂ ಸಿ ಪದಾಧಿಕಾರಿಗಳು,ಪರಿಸರ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಸೋಮೇಶ್ವರ ಕ್ರೀಡಾ ತಂಡದ ಪದಾಧಿಕಾರಿಗಳು, ಸಾರ್ವಜನಿಕರು ಇದ್ದರು. ಕೊನೆಯಲ್ಲಿ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಲಾಯಿತು.
