ಸುದ್ದಿ ಕನ್ನಡ ವಾರ್ತೆ
ಶಿರಸಿ:ತಾಲೂಕಿನ ದೇವನಳ್ಳಿ ಸಮೀಪದ ಬಿಳಿಗೆರೆ ಗ್ರಾಮದಲ್ಲಿ ರಾತ್ರೋರಾತ್ರಿ ಎಂಟು ದನಗಳನ್ನು ಕಳ್ಳರು ಅಪಹರಿಸಿರುವ ಘಟನೆ ಬೆಳಕಿಗೆ ಬಂದಿದೆ.

ಗ್ರಾಮದ ಸುಬ್ಬಾ ರಾಮಾ ಗೌಡ ಹಾಗೂ ನರಸಿಂಹ ಬೀರಾ ಗೌಡ ಅವರಿಗೆ ಸೇರಿದ ಹಸುಗಳನ್ನು ರಾತ್ರಿ ವೇಳೆ ಕೊಟ್ಟಿಗೆಯಲ್ಲಿ ಕಟ್ಟಿದ್ದ ಸ್ಥಿತಿಯಲ್ಲೇ ಕಳ್ಳರು ಕದ್ದುಕೊಂಡು ಪರಾರಯಾಗಿದ್ದಾರೆ.ಬೆಳಿಗ್ಗೆ ಎದ್ದು ಕೊಟ್ಟಿಗೆಗೆಹೋದಾಗ ದನಗಳು ಕಾಣಿಸದೇ ಇದ್ದುದರಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಗಾಬರಿಗೊಂಡು ಆತಂಕವುಂಟಾಯಿತು.

ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಗ್ರಾಮ ಪಂಚಾಯತ ಸದಸ್ಯರು ಹಾಗೂ ಹಿಂದೂ ಕಾರ್ಯಕರ್ತರು ಆಗಮಿಸಿ ಪರಿಶೀಲನೆ ನಡೆಸಿದರು. ಗೋ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದರ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂಬಂಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗೋ ಕಳ್ಳರನ್ನು ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಪಿಎಸ್‌ಐ ಸಂತೋಷಕುಮಾರ ಅವರ ನೇತೃತ್ವದಲ್ಲಿ ಪಿಎಸ್‌ಐ ಅಶೋಕ ರಾಥೋಡ ತನಿಖೆ ನಡೆಸುತ್ತಿದ್ದಾರೆ. ಗೋ ಕಳ್ಳರನ್ನು ಶೀಘ್ರ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಪೊಲೀಸರನ್ನು ಒತ್ತಾಯಿಸಿದ್ದಾರೆ.