ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಇಡಗುಂದಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಜನವರಿ 12 ಸೋಮವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಬೈಲ್ ಆವರಣದಲ್ಲಿ ನಡೆಯಿತು. ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸುವಂತಹ ಕಾರ್ಯಕ್ರಮ ಇದಾಗಿದ್ದು, ವಿವಿಧ ಶಾಲಾ ವಿದ್ಯಾರ್ಥಿಗಳು ಉತ್ಸಾಹದಿಂದ ತಮ್ಮ ಕಲಾ ಪ್ರದರ್ಶನ ನೀಡಿ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದರು.
ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಯಲ್ಲಾಪುರ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಯಲ್ಲಾಪುರ, ಸಮೂಹ ಸಂಪನ್ಮೂಲ ಕೇಂದ್ರ ಇಡಗುಂದಿ ಇವರ ಸಯುಕ್ತ ಆಶಯದಲ್ಲಿ ಈ ಕಲಿಕಾ ಹಬ್ಬ ಆಯೋಜಿಸಲಾಗಿತ್ತು.
ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಸುಮಾರು 15ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
