ಸುದ್ಧಿಕನ್ನಡ ವಾರ್ತೆ
ಯಲ್ಲಾಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರ ಮಾವಳ್ಳಿ ಕ್ರಾಸ್ ಬಳಿ ಕಲ್ಲಿದ್ದಲು ತುಂಬಿದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಕಾರವಾರ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿ ಮಾವಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿಯಲ್ಲಿದ್ದ ಕಲ್ಲಿದ್ದಲು ಹೆದ್ದಾರಿ ಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಲಾರಿಯು ಜಖಂಗೊಂಡಿದ್ದು, ಚಾಲಕ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ.
