ಸುದ್ದಿ ಕನ್ನಡ ವಾರ್ತೆ
ಜೊಯಿಡಾ: ತಾಲ್ಲೂಕು ಆಡಳಿತ ಸೌಧ ಸಭಾಂಗಣದಲ್ಲಿ ತಹಶಿಲ್ದಾರ ಮಂಜುನಾಥ ಮುನ್ನಳ್ಳಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ ಶುಕ್ರವಾರ ನಡೆಯಿತು.
ಈ ಸಂದರ್ಭದಲ್ಲಿ ತಹಶಿಲ್ದಾರ ಮಂಜುನಾಥ ಮುನ್ನಳ್ಳಿ ಮಾತನಾಡಿ ಶಾಲಾ ಮಕ್ಕಳಿಂದ ನಡೆಯುವ ಎಲ್ಲಾ ಕಾರ್ಯಕ್ರಮಗಳು ಕಡ್ಡಾಯವಾಗಿ ಕನ್ನಡ ಭಾಷೆಯಿಂದ ಮಾಡಬೇಕು . ಹಿಂದಿ ಭಾಷೆಯಲ್ಲಿ ಹಾಡುವುದನ್ನು ಕಡಿಮೆ ಮಾಡಿ ಎಂದು ಶಿಕ್ಷಣ ಇಲಾಖೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತಿ ವರ್ಷದಂತೆ ಇಲಾಖಾವಾರು ಜವಾಬ್ದಾರಿ ಹಂಚಿಕೆ ಮಾಡಲಾಯಿತು.
ಸಭೆಯಲ್ಲಿ ಮಹಿಳಾ ಮುಖಂಡೆ ಶಕುಂತಲಾ ಹಿರೆ ಗೌಡ, ಭವಾನಿ ಚೌವ್ಹಾಣ್, ಸುಧಾಕರ ದೇಸಾಯಿ, ಸುಭಾಷ ಗಾವಡಾ ತಾಲ್ಲೂಕು ಮಟ್ಟದ ಇಲಾಖಾ ಅಧಿಕಾರಿಗಳು ಇದ್ದರು.
