ಸುದ್ದಿ ಕನ್ನಡ ವಾರ್ತೆ
ಭಟ್ಕಳ: ತಾಲೂಕಿನ ಶಿರಾಲಿ ಸಮೀಪದ ವೆಂಕಟಾಪುರ ಬಳಿ ಶನಿವಾರ ತಡ ರಾತ್ರಿ ನಡೆದ ಕಾರು ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಕಾರು ಶಿರಾಲಿಯಿಂದ ಭಟ್ಕಳದ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ
ಎಂದು ಹೇಳಲಾಗಿದೆ. ಕಾರು ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಜೋರಾಗಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಮೃತರನ್ನು ಬಿಲಾಲ್ (17)ಹಾಗೂ ಅಯಾನ್ (19) ಎಂದು ಗುರುತಿಸಲಾಗಿದೆ. ಇಬ್ಬರಲ್ಲಿ ಒಬ್ಬರನ್ನು ಉಡುಪಿಗೆ ಆಸ್ಪತ್ರೆಗೆ ಒಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳೀಯ ನಿವಾಸಿಗಳು ಮತ್ತು ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿದ್ದವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು. ಆದರೆ ದುರದೃಷ್ಟವಶಾತ್ ಇಬ್ಬರೂ ಯುವಕರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಭಟ್ಕಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
