ಸುದ್ದಿ ಕನ್ನಡ ವಾರ್ತೆ
ಶಿರಸಿ:ಉತ್ತರಕನ್ನಡ ಜಿಲ್ಲೆಯ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸುಳಿಮುರ್ಕಿ ಮತ್ತು ಮೊಗೇಹಳ್ಳ ವಲಯದಲ್ಲಿ ಸತತವಾಗಿ ಅಪಘಾತ ಸಂಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ,ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ರವಿವಾರ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ,ರಸ್ತೆ ವಿಸ್ತರಣೆಗೆ ಇರುವ ಅಡೆತಡೆಗಳನ್ನು ನಿವಾರಿಸಿ ಶೀಘ್ರವಾಗಿ ಕಾಮಗಾರಿ ಆರಂಭಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
