ಸುದ್ದಿ ಕನ್ನಡ ವಾರ್ತೆ
ಯಳಂದೂರು : ಶಾಲಾ ಕಾಲೇಜು ವಿದ್ಯಾರ್ಥಿಗಳು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆನ್ನುವುದು ನಮ್ಮೆಲ್ಲರ ಸುರಕ್ಷತೆಗಾಗಿ ಎನ್ನುವುದನ್ನು ನಾವೆಲ್ಲರೂ ಅರಿತು ಕೊಳ್ಳುವ ಮೂಲಕ ಪೋಷಕರು ಮತ್ತು ಸಾರ್ವಜನಿಕರಿಗೆ ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕೆಂದು ಡಿ ವೈ ಎಸ್ ಪಿ ಧರ್ಮೇಂದ್ರ ರವರು ಅಭಿಪ್ರಾಯ ವ್ಯಕ್ತಪಡಿಸಿದರು..
ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಮತ್ತು ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಡಿ ವೈ ಎಸ್ ಪಿ ಧರ್ಮೇಂದ್ರ ರವರು ಚಾಲನೆ ನೀಡಿ ಮಾತನಾಡಿ .
ಮಕ್ಕಳು ವಾಹನ ಚಲಾಯಿಸಿ ಅನಾಹುತಗಳಾದಲ್ಲಿ ಅವರ ಪಾಲಕರು ಜೈಲಿಗೆ ಹೋಗುವ ಪರಿಸ್ಥಿತಿ ಇದೆ. 18 ವರ್ಷ ತುಂಬಿದ ನಂತರವಷ್ಟೇ ವಾಹನ ಚಾಲನೆಗೆ ಅರ್ಹರು. ಸಾರಿಗೆ ಇಲಾಖೆಯ ಮೂಲಕ ಚಾಲನ ಪರವಾನಗಿ, ವಾಹನ ಮಾಲೀಕತ್ವ ಮತ್ತು ವಿಮೆ ಪ್ರಮಾಣ ಪತ್ರಗಳನ್ನು ಹೊಂದಿದ್ದಲ್ಲಿ ಮಾತ್ರ ವಾಹನ ಚಾಲನೆ ಮಾಡಬೇಕು. ಸಂಚಾರಿ ನಿಯಮಗಳು ಎಲ್ಲರ ಸುರಕ್ಷತೆಗಾಗಿ ರೂಪಿತವಾಗಿದ್ದು, ನಿಯಮ ಪಾಲನೆ ನಮ್ಮ ಜವಾಬ್ದಾರಿಯಲ್ಲ ಎನ್ನುವ ಧೋರಣೆ ನಾವೆಲ್ಲರೂ ಬಿಡಬೇಕು. ಕಾನೂನು ಪಾಲನೆ ನಮ್ಮ ಆದ್ಯ ಕರ್ತವ್ಯ. ವಿದ್ಯಾರ್ಥಿಗಳು ಶಿಸ್ತು, ಕಾನೂನು ಪಾಲನೆ ಮತ್ತು ಕಾನೂನಿನ ಬಗ್ಗೆ ತಿಳಿದುಕೊಂಡು ದೇಶದ ಅಭಿವೃದ್ಧಿಗೆ ಪಣ ತೊಡಬೇಕು, ಅಲ್ಲದೆ ಸಂಚಾರಿ ನಿಯಮದ ಬಗ್ಗೆ ರಸ್ತೆ ಸುರಕ್ಷತೆ ಮತ್ತು ಕಾನೂನಿನ ಬಗ್ಗೆ ವಿದ್ಯಾರ್ಥಿಗಳು ತಮ ಪೋಷಕರಿಗೆ ಮತ್ತು ಸಾರ್ವಜನಿಕರಿಗೆ ತಿಳಿಸುವಂತಹ ಕೆಲಸ ಮಾಡಬೇಕು ಎಂಬ ಸಲಹೆ ನೀಡಿದರು.
ನಂತರ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚಾರಿ ನಿಯಮದ ಬಗ್ಗೆ ವಿದ್ಯಾರ್ಥಿಗಳು ಜಾಥ ತೆರಳಿ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಘೋಷಣೆ ಕೂಗುತ್ತಾ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಸಿಪಿಐ ಜಿ ಕೆ ಸುಬ್ರಹ್ಮಣ್ಯ, ಪಿಎಸ್ಐ. ಎಸ್ ಕೆ .ಆಕಾಶ್ ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ಆರ್ ನಂಜುಂಡಯ್ಯ ಶಿಕ್ಷಕ ಪುಟ್ಟಸ್ವಾಮಿ, ಶ್ರೀಧರ್ ನಾಯಕ್, ಪೊಲೀಸ್ ಪೇದೆ ಜಡೆ ಸ್ವಾಮಿ , ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ವರದಿ ಎಸ್.ಪುಟ್ಟಸ್ವಾಮಿ ಹೊನ್ನೂರು ಚಾಮರಾಜನಗರ ಜಿಲ್ಲೆ
