ಸುದ್ಧಿಕನ್ನಡ ವಾರ್ತೆ
ಪಣಜಿ: ನೂತನವಾಗಿ ಆಯ್ಕೆಯಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ರವರು ಜನವರಿ 30 ರಂದು ಗೋವಾಕ್ಕೆ ಆಗಮಿಸಲಿದ್ದಾರೆ. ಬಿಜೆಪಿ ಅಧ್ಯಕ್ಷರಾಗಿ ಜವಾಬ್ದಾರಿ ಸ್ವೀಕರಿಸಿದ ನಂತರ ಅವರ ಮೊದಲ ಗೋವಾ ಭೇಟಿ ಇದಾಗಿದ್ದು, ಗೋವಾ ರಾಜ್ಯ ಬಿಜೆಪಿ ವಲಯದಲ್ಲಿ ಉತ್ಸಾಹದ ವಾತಾವರಣ ಮನೆಮಾಡಿದೆ.
ಲಭ್ಯವಾದ ಮಾಹಿತಿಯ ಅನುಸಾರ- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ರವರು ತಮ್ಮ ಎರಡು ದಿನಗಳ ಗೋವಾ ಭೇಟಿಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಬಿಜೆಪಿ ರಾಜ್ಯಾಧ್ಯಕ್ಷ ದಾಮು ನಾಯ್ಕ ಹಾಗೂ ಕೋರ್ ಕಮೀಟಿಯ ಸದಸ್ಯರೊಂದಿಗೆ ಸಂವಾದ ನಡೆಸಲಿದ್ದಾರೆ. ಇಷ್ಟೇ ಅಲ್ಲದೆಯೇ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಕೂಡ ಸಂವಾದ ನಡೆಸಿ ಬಿಜೆಪಿ ಸಂಘಟನೆ ಹೆಚ್ಚಳ ಕುರಿತಂತೆಯೂ ಚರ್ಚೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ರವರು ವಿಶೇಷವಾಗಿ ದಕ್ಷಿಣ ಗೋವಾದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುವ ಸಾಧ್ಯತೆಯಿದೆ. ಅವರು ಪಕ್ಷದ ದೃಷ್ಠಿಯಿಂದ ಕೆಲ ಮಹತ್ವದ ಬೈಠಕ್ ನಡೆಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಮುಂಬರುವ ಗೋವಾ ವಿಧಾನಸಭಾ ಚುನಾವಣೆಯ ದೃಷ್ಠಿಯಿಂದಲೂ ಕೂಡ ಅವರು ಪಕ್ಷದ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಿದ್ದಾರೆ.
