ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ರಾಮನಗರ ಗ್ರಾಮ ಪಂಚಾಯತ ವ್ಯಾಪ್ತಿಯ ರಾಮನಗರದ ಹನುಮಾನಲೇನ್ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಿ ಆರ್ ಪಿ ಗಳು, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ಬಿ ಹೆಚ್ ಭಾಗವಾನ,ಸಹ ಶಿಕ್ಷಕರಾದ ಮಂಜುನಾಥ ಕೊಟಬಾಗಿ,ಸಹ ಶಿಕ್ಷಕಿಯರಾದ ನಾಗರತ್ನಾ ಮೊಗೇರ,ಅನಿಸ್ ಫಾತಿಮಾ,ಸಂಜನಾ ಮಿರಾಶಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಬಾಲ್ಯದ ಜೀವನ,ಶಿಕ್ಷಣ,ಸ್ವಾತಂತ್ರ್ಯ ಸಂಗ್ರಾಮದಲ್ಲಿ ಫಾರ್ವರ್ಡ್ ಬ್ಲಾಕ್,ಆಜಾದ್ ಹಿಂದ್ ಪೌಜ್ ಮೂಲಕ ಹೋರಾಟದಲ್ಲಿನ ಪಾತ್ರ,ಭಾರತೀಯ ರಾಷ್ಟ್ರೀಯ ಸೇನೆ (INA)ಕುರಿತು,ಜೈ ಹಿಂದ್ ಘೋಷಣೆ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ರ ಕುರಿತು ಸ್ಪರ್ಧೆಗಳು ನಡೆಯಿತು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ವಂದನೆಯನ್ನು ಸಲ್ಲಿಸಲಾಯಿತು.
