ಸುದ್ದಿ ಕನ್ನಡ ವಾರ್ತೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಭೀಕರ ದುರಂತ ಸಂಭವಿಸಿದೆ. ಸೇನೆಯ ವಾಹನವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 10 ಯೋಧರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
17 ಯೋಧರನ್ನು ಹೊತ್ತೊಯ್ಯುತ್ತಿದ್ದ ವಾಹನವು ಚಾಲಕನ ನಿಯಂತ್ರಣ ಕಳೆದುಕೊಂಡು 200 ಅಡಿ ಆಳದ ಕಂದಕಕ್ಕೆ ಬಿದ್ದಿದೆ.ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಭೀಕರ ದುರಂತ ಸಂಭವಿಸಿದೆ. 17 ಯೋಧರಿದ್ದ ವಾಹನ ನಿಯಂತ್ರಣ ಕಳೆದುಕೊಂಡು 200 ಅಡಿ ಆಳಕ್ಕೆ ಬಿದ್ದ ಪರಿಣಾಮ 10 ಮಂದಿ ವೀರ ಯೋಧರು ಹುತಾತ್ಮರಾಗಿದ್ದಾರೆ. ಖಾನಿ ಟಾಪ್ ಬಳಿ ನಡೆದ ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಖಾನಿ ಟಾಪ್ ಬಳಿ ಭದೇರ್ವಾಹ್-ಚಂಬಾ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ವಾಹನವು ಎತ್ತರದ ಪ್ರದೇಶಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.
ತಕ್ಷಣವೇ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದರು. “ನಾಲ್ವರು ಸೈನಿಕರು ಸ್ಥಳದಲ್ಲೇ ಮೃತಪಟ್ಟಿದ್ದರು,’ ಎಂದು ಪಿಟಿಐ ಉಲ್ಲೇಖಿಸಿರುವ ಅಧಿಕಾರಿಗಳು ತಿಳಿಸಿದ್ದಾರೆ. ನಂತರ, ಗಾಯಗೊಂಡಿದ್ದ ಆರು ಮಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ಇದರಿಂದ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
