ಸುದ್ದಿ ಕನ್ನಡ ವಾರ್ತೆ

.ಚಾಮರಾಜನಗರ ಜಿಲ್ಲೆಯ ಯಳಂದೂರು ಪಟ್ಟಣದ ಪೊಲೀಸ್ ಠಾಣೆ ಹಾಗೂ ಅಗರ ಮಾಂಬಳ್ಳಿ ಪೊಲೀಸ್ ಉಪ ಠಾಣೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಅವರು ಭೇಟಿ ನೀಡಿ ಠಾಣೆಗಳ ಕಾರ್ಯಚಟುವಟಿಕೆಗಳನ್ನು ಶುಕ್ರವಾರ ಪರಿಶೀಲಿಸಿದರು.

ಠಾಣೆಗಳ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ತಡೆಗಟ್ಟುವಿಕೆ, ಸಾರ್ವಜನಿಕರೊಂದಿಗೆ ಸ್ನೇಹಪೂರ್ಣ ಸಂಪರ್ಕ, ಪ್ರಕರಣಗಳ ತ್ವರಿತ ತನಿಖೆ ಹಾಗೂ ಬೀಟ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಅಗತ್ಯ ಸೂಚನೆಗಳನ್ನು ಸಿಬ್ಬಂದಿಗೆ ನೀಡಿದರು.
ಅಲ್ಲದೆ ಠಾಣಾ ರಿಜಿಸ್ಟರ್ ಗಳ ಸಮರ್ಪಕ ನಿರ್ವಹಣೆ, ತನಿಖೆಯಲ್ಲಿರುವ ಪ್ರಕರಣಗಳಲ್ಲಿ ಪ್ರಗತಿ ತೋರುವ ಸಂಬಂಧ, ಸಮರ್ಪಕ ರಾತ್ರಿ ಗಸ್ತು ಜಾರಿ ಹಾಗೂ ಮುಂಬರುವ ಹಬ್ಬ/ಜಾತ್ರೋತ್ಸವಗಳ ಬಗ್ಗೆ ಮುಂಚಿತವಾಗಿ ಮಾಹಿತಿ ಸಂಗ್ರಹಣೆ ಮಾಡಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳುವ ಸಂಬಂಧ ಸಲಹೆ ಸೂಚನೆಗಳನ್ನು ನೀಡಿ ನಂತರ ವಸತಿಗೃಹ ಸಮುಚ್ಚಯಗಳ ಕಡೆ ಭೇಟಿ ನೀಡಿ ಠಾಣಾ ಆವರಣ ಹಾಗೂ ಸುತ್ತಮುತ್ತ ಸ್ವಚ್ಛತೆ ಕಾಪಾಡುವ ಸಂಬಂಧ ಸೂಚನೆಗಳನ್ನು ನೀಡಿ, ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸುವುದು, ಸಂಚಾರಿ ವ್ಯವಸ್ಥೆ ಸುಧಾರಣೆ, ಅಪರಾಧಿಗಳ ಮೇಲೆ ನಿಗಾ ವಹಿಸುವುದು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ರವರು ಸೂಚನೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಸಿಪಿಐ .ಜಿ .ಕೆ ಸುಬ್ರಹ್ಮಣ್ಯ, ಯಳಂದೂರು ಪೊಲೀಸ್ ಠಾಣೆ ಪಿಎಸ್ಐ. ಎಸ್ ಕೆ .ಆಕಾಶ್, ಆಗರ – ಮಾಂಬಳ್ಳಿ ಪೊಲೀಸ್ ಠಾಣೆ ಪಿಎಸ್ಐ .ಕರಿಬಸಪ್ಪ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು .
ವರದಿ. ಎಸ್.ಪುಟ್ಟಸ್ವಾಮಿಹೊನ್ನೂರು ಚಾಮರಾಜನಗರ ಜಿಲ್ಲೆ