ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ಅಸು ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಿಂದೋಳಿ ಶಾಲೆಯಲ್ಲಿ ಸಡಗರ ಸಂಭ್ರಮದಿಂದ 77 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಗಣರಾಜ್ಯೋತ್ಸವದ ನಿಮಿತ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಗುರುನಾಥ ಮಾಜಾಳಕರ ನೆರವೇರಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕರಾದ ಅನಿಲ ರಾಠೋಡರವರು 1950 ಜನವರಿ 26 ರಂದು ಡಾ.ಬಿ ಆರ್ ಅಂಬೇಡ್ಕರ್ ಅವರಿಂದ ರಚಿತವಾದ ಸಂವಿಧಾನ ಜಾರಿಗೆ ಬಂದಿತು.ಇದು ನಮಗೆ ಸಮಾನತೆ,ವಾಕ್ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕುಗಳನ್ನು ನೀಡಿದೆ.ಭಾರತವು ವಿವಿಧ ಭಾಷೆ ಧರ್ಮ ಮತ್ತು ಸಂಸ್ಕೃತಿಗಳನ್ನೂ ಹೊಂದಿದ್ದರೂ ನಾವೆಲ್ಲರೂ ಒಂದೇ ಎಂಬ ಭಾವನೆ ನಮ್ಮ ಶಕ್ತಿಯಾಗಿದೆ.ಗಣರಾಜ್ಯೋತ್ಸವ ಕೇವಲ ಒಂದು ದಿನದ ಆಚರಣೆಯಲ್ಲ,ಬದಲಾಗಿ ದೇಶದ ರಕ್ಷಣೆ ಮತ್ತು ಪ್ರಗತಿಗೆ ಪಣತೊಡುವ ದಿನವಾಗಿದೆ.ನಾವು ಸುಶಿಕ್ಷಿತರಾಗಿ ದೇಶದ ಬೆಳವಣಿಗೆಗೆ ಶ್ರಮಿಸಬೇಕು.ನಮ್ಮ ದೇಶದ ಪರಂಪರೆಯನ್ನು ಗೌರವಿಸಿ,ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯೋಣ ಎಂದು ಹೇಳಿದರು. ಶಾಲೆಯ ಸಹ ಶಿಕ್ಷಕರಾದ ಆನಂದ ಪಿ,ವಿದ್ಯಾ ಮೇಡಂ ಭಾರತದ ಸಂವಿಧಾನದ ಮಹತ್ವ, ಪ್ರಜಾಪ್ರಭುತ್ವದ ಮೌಲ್ಯಗಳು, ವೈವಿಧ್ಯತೆಯಲ್ಲಿ ಏಕತೆ ಮತ್ತು ದೇಶದ ಅಭಿವೃದ್ಧಿಯ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಸ್ವಾಗತ, ನಿರೂಪಣೆಯನ್ನು ಸಹ ಶಿಕ್ಷಕರಾದ ಆನಂದ ಪಿ.ನಡೆಸಿಕೊಟ್ಟರು. ಸಹ ಶಿಕ್ಷಕಿಯಾದ ವಿದ್ಯಾ ಮೇಡಂ ವಂದನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಅಸು ಗ್ರಾಮ ಪಂಚಾಯತ ಸದಸ್ಯರಾದ ನಾಗೇಶ ಕಾಪೋಲಕರ,ಶಾಲೆಯ ಹಳೆಯ ವಿದ್ಯಾರ್ಥಿಗಳಾದ ನಿವೇದಿತಾ ಮಿರಾಶಿ,ಸುಪ್ರಿಯಾ ಶಿರೋಡಕರ,ಇನ್ನಿತರರು ಉಪಸ್ಥಿತರಿದ್ದರು.