ಸುದ್ದಿ ಕನ್ನಡ ವಾರ್ತೆ

ಬೆಂಗಳೂರು: ಸೇವೆಯಲ್ಲಿರುವಾಗಲೇ ನಿಧನರಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಪುತ್ರಿ ಚೈತನ್ಯಾ ಎಂ. ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಕರ್ನಾಟಕ ಸರ್ಕಾರದಿಂದ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಬುಧವಾರ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಚೈತನ್ಯಾ ಎಂ. ಬೀಳಗಿ ಅವರು ತಮ್ಮ ತಂದೆಯಂತೆ ಸಮಾಜಮುಖಿಯಾಗಿ ಹಾಗೂ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಲಿ ಎಂದು ಮುಖ್ಯಮಂತ್ರಿಗಳು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್.ಕೆ. ಪಾಟೀಲ್‌, ಎಂ.ಬಿ. ಪಾಟೀಲ್‌, ಶಿವಾನಂದ ಪಾಟೀಲ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ ಅವರು ಉಪಸ್ಥಿತರಿದ್ದರು.