ಸುದ್ದಿ ಕನ್ನಡ ವಾರ್ತೆ
ಜೋಯಿಡಾ: ತಾಲೂಕಿನ ನಾಗೋಡಾ ಗ್ರಾಮ ಪಂಚಾಯತ ವತಿಯಿಂದ ಕರಂಜೋಯಿಡಾ ಗ್ರಾಮದ ನಿವಾಸಿಗಳಿಗೆ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಕಸದ ಡಬ್ಬಿಗಳನ್ನು ವಿತರಿಸಲಾಯಿತು.ಗ್ರಾಮದ ಸಾರ್ವಜನಿಕರ ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಸದಸ್ಯರು ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದು, ಗ್ರಾಮಸ್ಥರು ಮನೆಮನೆಗಳಲ್ಲಿ ಕಸವನ್ನು ಸರಿಯಾಗಿ ವಿಲೇವಾರಿ ಮಾಡಬೇಕು ಹಾಗೂ ಗ್ರಾಮವನ್ನು ಸ್ವಚ್ಛವಾಗಿಡಲು ಸಹಕರಿಸಬೇಕು ಎಂದು ಮನವಿ ಮಾಡಿದರು. ಗ್ರಾಮಸ್ಥರು ಕೂಡ ಪಂಚಾಯತದ ಈ ಕಾರ್ಯವನ್ನು ಸ್ವಾಗತಿಸಿ, ಸಹಕರಿಸುವುದಾಗಿ ಭರವಸೆ ನೀಡಿ ಅಭಿನಂದನೆ ಸಲ್ಲಿಸಿದರು.

ಈ ಕಸದ ಡಬ್ಬಿ ವಿತರಣೆ ಮೂಲಕ ಕರಂಜೋಯಿಡಾ ಗ್ರಾಮದಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಆರೋಗ್ಯಕರ ಪರಿಸರ ನಿರ್ಮಾಣ ಮಾಡುವುದು ಪಂಚಾಯತನ ಮುಖ್ಯ ಉದ್ದೇಶವಾಗಿದೆ.