ಸುದ್ದಿ ಕನ್ನಡ ವಾರ್ತೆ

ಜೋಯಿಡಾ: ಜಿಲ್ಲಾ ಪಂಚಾಯತ ಉತ್ತರ ಕನ್ನಡ,ತಾಲೂಕು ಪಂಚಾಯತ ಜೋಯಿಡಾ,ಶಾಲಾ ಶಿಕ್ಷಣ ಇಲಾಖೆ ಜೋಯಿಡಾ ಕೇಂದ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕೇಂದ್ರ ಸಂಪನ್ಮೂಲ ಕೇಂದ್ರ ಜೋಯಿಡಾ ಸರ್ಕಾರಿ ಕಿರಿಯ ಪ್ರಾಥಮಿಕ ಖಾನಗಾಂವ ಶಾಲೆಯ
ಜೈತನ್ಯ ಇಕೋ-ಕ್ಲಬ್ ವತಿಯಿಂದ ಜರುಗಿತು.

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ
ಇಡೀ ಗ್ರಹಗಳಲ್ಲಿ ಅತ್ಯದ್ಭುತವಾದ ಗ್ರಹ ಭೂಮಿ ಅದನ್ನು ನಮ್ಮ ಮುಂದಿನ ಪೀಳಿಗೆಗಾಗಿ ಸಂರಕ್ಷಿಸೋಣ ಎಂಬ ಘೋಷಣೆಯೊಂದಿಗೆ ತಾಲೂಕಿನ ನಾಗೋಡಾ ಗ್ರಾಮ ಪಂಚಾಯತ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಖಾನಗಾಂವ ಶಾಲೆಯ ವತಿಯಿಂದ ವಿದ್ಯಾರ್ಥಿಗಳಿಗೆ ಹೊರಸಂಚಾರ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಶಾಲೆಯ ಶಿಕ್ಷಕ ವೃಂದ, ಪಾಲಕರು ಹಾಗೂ ಪೋಷಕರ,ಗ್ರಾಮ ಪಂಚಾಯತ ಸದಸ್ಯರಾದ ದಿಗಂಬರ ದೇಸಾಯಿ, ಸಹಕಾರದಲ್ಲಿ ಖಾನಗಾಂವ ಸಮೀಪದ ಹಳ್ಳದ ಹತ್ತಿರದ ಗದ್ದೆಯಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತಾಗಿ ಗಿಡಗಳು, ಮರಗಳು, ಬಳ್ಳಿಗಳು, ಪ್ರಾಣಿ–ಪಕ್ಷಿಗಳು ಹಾಗೂ ನೀರಿನ ಮೂಲಗಳ ಮಹತ್ವದ ಬಗ್ಗೆ ಮಾಹಿತಿ ನೀಡಲಾಯಿತು. ಖಾನಗಾಂವ ಶಾಲೆಯ ಮುಖ್ಯ ಶಿಕ್ಷಕರಾದ ಶಾಂತಕುಮಾರ ಸರ್ ಅವರ ಮಾರ್ಗದರ್ಶನದಲ್ಲಿ ವಿವಿಧ ವಿಷಯಗಳ ಕುರಿತು ಮಕ್ಕಳಿಗೆ ಉಪಯುಕ್ತ ತಿಳುವಳಿಕೆ ನೀಡಲಾಯಿತು.
ನಂತರ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳಿಂದ ತಂದ ತಿಂಡಿಗಳನ್ನು ಪರಸ್ಪರ ಹಂಚಿಕೊಂಡು ಸವಿದರು. ಬಳಿಕ ತಮ್ಮ ಇಷ್ಟದ ಆಟಗಳನ್ನು ಆಡಿ ಸಂಭ್ರಮಿಸಿದರು. ಮಧ್ಯಾಹ್ನದ ವೇಳೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ರಮೇಶ ಗಾವಡಾ ಹಾಗೂ ಸಮಿತಿಯ ಪದಾಧಿಕಾರಿಗಳಾದ ರಾಜೇಶ ಗಾವಡಾ ಅವರ ನೇತೃತ್ವದಲ್ಲಿ, ಪಾಲಕರು ಮತ್ತು ಸ್ಥಳೀಯ ಗ್ರಾಮಸ್ಥರ ಸಹಕಾರದಿಂದ ಎಲ್ಲರಿಗೂ ಭೋಜನದ ವ್ಯವಸ್ಥೆ ಮಾಡಲಾಯಿತು.

ಈ ಹೊರಸಂಚಾರ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ಅನೇಕ ವಿಷಯಗಳನ್ನು ತಿಳಿದುಕೊಂಡು ಸಂತೋಷ ವ್ಯಕ್ತಪಡಿಸಿದರು.