ಸುದ್ದಿ ಕನ್ನಡ ವಾರ್ತೆ
ಫೆಬ್ರವರಿ 7 ರಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರಿಂದ ದಾಂಡೇಲಿ ರೈಲುಸಂಚಾರ ಪ್ರಾರಂಭಿಸಲಾಗುವದು
ಕೊರೊನಾ ಸಾಂಕ್ರಾಮಿಕದ ಕಾರಣ ದಿಂದ ಸ್ಥಗಿತಗೊಂಡಿದ್ದ ದಾಂಡೇಲಿ ರೈಲು ಸೇವೆ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿರಂತರ ಪರಿಶ್ರಮದ ಫಲವಾಗಿ ಮತ್ತೆ ಆರಂಭಗೊಳ್ಳುತ್ತಿದೆ.
ಫೆಬ್ರವರಿ 7ನೇ ತಾರೀಕು ಶನಿವಾರ ಸಂಜೆ 4:00 ಗಂಟೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಈ ರೈಲು ಸಂಚಾರವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ.
ಈ ಭಾಗದ ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಸಂಸದರು, ಕೇಂದ್ರ ಸರ್ಕಾರದ ಮಟ್ಟದಲ್ಲಿ ಸತತ ಪ್ರಯತ್ನ ನಡೆಸಿ ರೈಲು ಸೇವೆಯನ್ನು ಪುನರಾರಂಭಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಮೂಲಕ ದಾಂಡೇಲಿ ಭಾಗದ ಜನತೆಗೆ ಹಾಗೂ ಸಾರಿಗೆ ಮತ್ತು ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಸಂಚಲನ ಮೂಡಲಿದೆ.ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ
