ಸುದ್ಧಿಕನ್ನಡ ವಾರ್ತೆ
Goa: ಗೋವಾದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದ್ದು ಅಕ್ಟೋಬರ್ 13 ರಂದು ಯಲ್ಲೊ ಅಲರ್ಟ ಘೋಷಿಸಲಾಗಿದೆ. ಭಾರಿ ಗಾಳಿ ಮಳೆಯಾಗುವ ಮುನ್ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ.

ಅಕ್ಟೋಬರ್ 13 ರಂದು 30 ರಿಂದ 40 ಕಿ.ಮಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಜನತೆ ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ರಾಜ್ಯದ ಜನತೆಗೆ ಮುನ್ಸೂಚನೆ ನೀಡಿದೆ.

ಕಳೆದ ಸೋಮವಾರ ಮತ್ತು ಮಂಗಳವಾರ ಗೋವಾದ ಸತ್ತರಿ ತಾಲೂಕಿನಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಅಂದು ಕಡಿತಗೊಂಡಿರುವ ವಿದ್ಯುತ್ ಸಂಪರ್ಕ ಇದೀಗ ತಾನೆ ದುರಸ್ಥಿಯಾಗುತ್ತಿದೆ. ಹೀಗಿರುವಾಗ ಮತ್ತೆ ಗಾಳಿ ಮಳೆಯಾದರೆ ಇನ್ನೇನು ಗತಿ..? ಎಂದು ಜನರು ಆತಂಕ ಪಡುವಂತಾಗಿದೆ.

ಪ್ರಸಕ್ತ ವರ್ಷ ಗೋವಾ ರಾಜ್ಯದಲ್ಲಿ ಈ ಹಿಂದಿನ ವರ್ಷಗಳ ವಾರ್ಷಿಕ ಸರಾಸರಿ ಮಳೆಗೆ ಹೋಲಿಸಿದರೆ ಅತಿ ಹೆಚ್ಚು ಮಳೆ ದಾಖಲಾಗಿದೆ. ಇನ್ನೂ ಕೂಡ ಮಳೆ ಮುಂದುವರೆದಿರುವುದು ಕೃಷಿಕರಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ. ಪ್ರಸಕ್ತ ವರ್ಷ ಹೆಚ್ಚಿನ ಕೃಷಿ ಕ್ಷೇತ್ರಕ್ಕೆ ಮಳೆಯಿಂದಾಗಿ ಹಾನಿಯುಂಟಾಗಿದೆ