ಸುದ್ದಿ ಕನ್ನಡ ವಾರ್ತೆ
ಭಟ್ಕಳ:ಪಟ್ಟಣದ ಐಸಿಎಸ್ಸಿ ಪಠ್ಯಕ್ರಮದ ವಿದ್ಯಾಂಜಲಿ ಪಬ್ಲಿಕ್ ಶಾಲೆಯ 5ನೇ ತರಗತಿ ವಿದ್ಯಾರ್ಥಿ ತೇಜ್ವಲಪ್ರಭ ಎನ್.ಡಿ. ಲೀಡ್ ಸಂಸ್ಥೆಯು ನಡೆಸಿದ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮೊದಲ ಸ್ಥಾನ ಪಡೆದಿದ್ದಾನೆ.
ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಈ ವಿದ್ಯಾರ್ಥಿ ಆಧುನಿಕ ತಂತ್ರಜ್ಞಾನ ಆಧಾರಿತ ಮನೆಯ ವಿನ್ಯಾಸವನ್ನು ಪ್ರದರ್ಶಿಸಿ ಜನ ಮೆಚ್ಚುಗೆ ಗಳಿಸಿದ್ದ. ಇದೇ ಕಾರ್ಯಕ್ರಮದಲ್ಲಿ ಕೋಡಿಂಗ್ ವಿಭಾಗದಲ್ಲಿ ಮತ್ತು ಇಂಗ್ಲಿಷ್ ಕ್ವಿಜ್ ವಿಭಾಗದಲ್ಲಿ ಇನ್ನೊಬ್ಬ ವಿದ್ಯಾರ್ಥಿನಿ ಮಾನ್ಯಾ ಲಕ್ಷ್ಮೀಶ ನಾಯ್ಕ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ್ದು ಶಾಲೆಯ ಗುಣಮಟ್ಟದ ಶಿಕ್ಷಣಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ಭಟ್ಕಳ ಎಜುಕೇಶನ್ ಟ್ರಸ್ಟ್ ಚೇರ್ಮನ್ ಡಾಕ್ಟರ್ ಸುರೇಶ ನಾಯಕ ವಿಶೇಷವಾಗಿ ಅಭಿನಂದಿಸಿದ್ದಾರೆ. ಟ್ರಸ್ಟಿನ ಸದಸ್ಯರು, ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ಪಾಲಕರು,ವಿದ್ಯಾರ್ಥಿಯ ಈ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.
