ಸುದ್ದಿ ಕನ್ನಡ ವಾರ್ತೆ
ಜೋಯಿಡಾ: ತಾಲೂಕಿನ ಮಾರಸಂಗಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ದುರ್ಗಾದೇವಿ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕರಾದ ಆರ್.ವಿ. ದೇಶಪಾಂಡೆ ಅವರು ತಮ್ಮ ಧರ್ಮಪತ್ನಿ ರಾಧಾ ಆರ್. ದೇಶಪಾಂಡೆ ಅವರೊಂದಿಗೆ ಭಾಗವಹಿಸಿದರು. ಈ ಪವಿತ್ರ ಸಂದರ್ಭದಲ್ಲಿ ನೂತನ ದೇವಾಲಯದಲ್ಲಿ ಪ್ರತಿಷ್ಠಾಪಿತ ಶ್ರೀ ದುರ್ಗಾದೇವಿಯ ಸನ್ನಿಧಾನದಲ್ಲಿ ವಿಶೇಷ ಪೂಜಾ ಕೈಂಕರ್ಯ ಸೇವೆಯನ್ನು ಅರ್ಪಿಸಿ, ನಾಡಿನ ಶಾಂತಿ, ಸಮೃದ್ಧಿ ಹಾಗೂ ಸರ್ವಜನರ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ದೇವಸ್ಥಾನ ಸಮಿತಿ ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ದೇವಾಲಯ ಉದ್ಘಾಟನಾ ಕಾರ್ಯಕ್ರಮವನ್ನು ಭಕ್ತಿ-ಭಾವದಿಂದ ಸಂಭ್ರಮದಿಂದ ನೆರವೇರಿಸಿದರು.