ಸುದ್ದಿ ಕನ್ನಡ ವಾರ್ತೆ
ಶಿರಸಿ: ತಿರುಪತಿಯ ರಾಷ್ಟ್ರಿಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ವಾಗ್ವರ್ಧಿನೀ ಪರಿಷತ್ ಆಯೋಜಿಸಿರುವ ನಾಲ್ಕನೆಯ ಅಖಿಲ ಭಾರತೀಯ ಸಂಸ್ಕೃತ ಛಾತ್ರಪ್ರಾತಿಭ ಸಮಾರಂಭದಲ್ಲಿ ನಡೆದ ಅದ್ವೈತ ವೇದಾಂತ ಶಾಸ್ತ್ರ ಭಾಷಣ ಸ್ಪರ್ಧೆಯಲ್ಲಿ ಸ್ವರ್ಣವಲ್ಲಿಯ ಶ್ರೀ ರಾಜರಾಜೇಶ್ವರೀ ಸಂಸ್ಕೃತ ಮಹಾಪಾಠಶಾಲೆಯ ಅದ್ವೈತ ವೇದಾಂತ ವಿದ್ಯಾರ್ಥಿ ನಾಗರಾಜ ಚಿದಂಬರ ಭಟ್ಟ ಗಂಗೇಮನೆ ಈತನು ದ್ವಿತೀಯ ಸ್ಥಾನವನ್ನು ಪಡೆದು ರಜತ ಪದಕ ಪುರಸ್ಕಾರಕ್ಕೆ ಭಾಜನನಾಗಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಸ್ವರ್ಣವಲ್ಲೀ ಮಹಾಸಂಸ್ಥಾಮ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿ, ಕಿರಿಯ ಶ್ರೀ ಆನಂದಬೋಧೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಸಂತೋಷವನ್ನು ವ್ಯಕ್ತಪಡಿಸಿ, ಆಶೀರ್ವದಿಸಿದ್ದಾರೆ. ವಿದ್ಯಾಸಂಸ್ಥೆಯ ಪದಾಧಿಕಾರಿಗಳು, ಪ್ರಾಚಾರ್ಯರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾರ್ದಿಕ ಶುಭಾಶಯಗಳನ್ನು ವ್ಯಕ್ತಪಡಿಸಿದ್ದಾರೆ.
