ಸುದ್ದಿ ಕನ್ನಡ ವಾರ್ತೆ

. ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್‌.ಡಿ. ದೇವೇಗೌಡ ಅವರ ನಿರ್ದೇಶನದಂತೆ ಹಾಗೂ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ಉತ್ತರ ಕನ್ನಡ ಜಿಲ್ಲಾ ಜನತಾದಳ (ಸೆಕ್ಯುಲರ್) ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ಸೂರಜ್ ನಾಯ್ಕ ಸೋನಿ ಅವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಜೆಡಿಎಸ್ ಕೋರ್ ಕಮಿಟಿ ರಾಜ್ಯಾಧ್ಯಕ್ಷರಾದ ಎಂ. ಕೃಷ್ಣಾರೆಡ್ಡಿ ಹಾಗೂ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಸೂರಜ್ ನಾಯ್ಕ ಸೋನಿ ಅವರಿಗೆ ನೇಮಕಾತಿ ಆದೇಶವನ್ನು ನೀಡಿ ಶುಭ ಹಾರೈಸಲಾಯಿತು.
ಈ ಹಿಂದೆ ರಾಜ್ಯ ಕೋರ್ ಕಮಿಟಿ ಸದಸ್ಯರಾಗಿದ್ದ ಸೂರಜ್ ನಾಯ್ಕ ಸೋನಿ
ಅವರು ಉತ್ತಮ ಮಾತುಗಾರಿಕೆ ಮತ್ತು ಸಂಘಟನಾ ಚಾತುರ್ಯವನ್ನು ಹೊಂದಿದ್ದಾರೆ. ಕಾರ್ಯಕರ್ತರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಇವರು, ಜಿಲ್ಲೆಯಲ್ಲಿ ಪಕ್ಷವನ್ನು ಪುನರ್ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ಪಕ್ಷದ ನಾಯಕರು ವ್ಯಕ್ತಪಡಿಸಿದ್ದಾರೆ. ಜವಾಬ್ದಾರಿ ಸ್ವೀಕರಿಸಿದ ಬಳಿಕ ಸೂರಜ್
ನಾಯ್ಕ ಸೋನಿ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ ಎಲ್ಲಾ ನನ್ನ ಪ್ರೀತಿಯ ಕಾರ್ಯಕರ್ತರಿಗೂ ಹೃದಯಾಂತರಾಳದ ಧನ್ಯವಾದಗಳು ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಪಕ್ಷದ 형, ಸಿದ್ಧಾಂತಗಳನ್ನು ಜನಸಾಮಾನ್ಯರ ಬಳಿ ಕೊಂಡೊಯ್ದು ಪಕ್ಷವನ್ನು ಬಲಪಡಿಸುವುದಾಗಿ ಹೇಳಿದರು.