ಸುದ್ದಿ ಕನ್ನಡ ವಾರ್ತೆ
ಕಾರವಾರ: ಆಧುನಿಕ ಯುಗದಲ್ಲಿ ಮಕ್ಕಳಿಂದ ಹಿಡಿದು ಹಿರಿಯರವರೆಗೂ, ಪ್ರತಿಯೊಬ್ಬರೂ ಅಂತರ್ಜಾಲದ ಬಳಕೆ ಮಾಡುತಿದ್ದು, ಇದರಲ್ಲಿ ಮಕ್ಕಳು ಹೆಚ್ಚಿನ ವಂಚನೆಗೆ ಒಳಗಾಗುತ್ತಿದ್ದು, ಮೊಬೈಲ್ನಿಂದ ಮಕ್ಕಳನ್ನು ದೂರವಿಡಬೇಕು ಎಂದು ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಅಲ್ಲಾಭಕ್ಷ ತಿಳಿಸಿದರು. ಅವರು ಗುರುವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆ ಇವರ ಸಹಯೋಗದಲ್ಲಿ ನಡೆದ ವಿಶ್ವ ಸುರಕ್ಷಿತ ಅಂತರ್ಜಾಲ ದಿನದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಸುರಕ್ಷಿತಾ ಅಂತರ್ಜಾಲದ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
ತಂತ್ರಜ್ಞಾನ ಬೆಳೆದಂತೆ ಅದನ್ನು ಬಳಸುವ ಜನರ ಸಂಖ್ಯೆಯೂ ಹೆಚ್ಚಾಗಿದ್ದು, ಮಕ್ಕಳ ಮೊಬೈಲ್ ಬಳಸುವಾಗ ವಂಚಕರು ಆಸೆ, ಅಮಿಷಗಳನ್ನು ಒಡ್ಡಿ ಕಳುಹಿಸುವ ಸಂದೇಶಗಳನ್ನು ಮಕ್ಕಳು ಅರಿಯದೆ ಲಿಂಕ್ಗಳಿಗೆ ಪ್ರವೇಶ ಮಾಡುವುದರಿಂದ ಹೆಚ್ಚಾಗಿ ವಂಚನೆಗೆ ಒಳಗಾಗುತ್ತಿದ್ದಾರೆ. ಆದ್ದ-ರಿಂದ ಮಕ್ಕಳ ಕೈಗೆ ಮೊಬೈಲ್ ನೀಡಬೇಡಿ. ಸುರಕ್ಷಿತ ಅಂತರ್ಜಾಲ ಬಗ್ಗೆ ಮಾಹಿತಿ ಪಡೆದ ತಾವುಗಳು ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸಬೇಕು ಎಂದರು.
ಸಿ.ಇ.ಎನ್ ಅಪರಾಧ ಪೊಲೀಸ್
ವಿಭಾಗದ ಡಿವೈಎಸ್ಪಿ ಬಿ.ಅಶ್ವಿನಿ ಮಾತನಾಡಿ, ಅಂಗೈಯಲ್ಲೇ ಜಗತ್ತು ತೋರಿಸುವ ಅಂತರ್ಜಾಲ ಇಂದು ಪ್ರತಿಯೊಬ್ಬರ ಬದುಕನ್ನು ಆವರಿಸಿಕೊಂಡಿದೆ. ಮಕ್ಕಳಿಂದ ಹಿಡಿದು ಹಿರಿಯರವರೆಗೂ, ಜನ ಸಾಮಾನ್ಯನಿಂದ ಹಿಡಿದು ತಜ್ಞರವರೆಗೂ ಅಂತರ್ಜಾಲದ ಬಳಕೆ ವ್ಯಾಪಿಸಿದೆ. ಅಂತರ್ಜಾಲ ಬಳಕೆದಾರರನ್ನು ವಂಚಿಸುವುದಕ್ಕಾಗಿಯೇ ಸಂಘ ಟಿ-ತ ಅಪರಾಧ ಮಾಡುವ ಜಾಲ ಇಂದು ಜಗತ್ತನ್ನೇ ಆಳುತ್ತಿದೆ. ವಿದ್ಯಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸೈಬರ್ ವಂಚನೆಯ ಜಾಲಕ್ಕೆ ಒಳಗಾಗುತ್ತಿದ್ದು, ಸರಿಯಾದ ಜ್ಞಾನ-ತಿಳುವಳಿಕೆ ಇಲ್ಲದೇ ನಾವಾಗಿಯೇ ಅಂತರ್ಜಾಲ ಬಳಕೆ ವೇಳೆ ತಪ್ಪುಗಳನ್ನು ಮಾಡಿ ತೊಂದರೆಗೀಡಾಗುತ್ತೇವೆ. ಆನ್ಲೈನ್ ಹೂಡಿಕೆ, ಉದ್ಯೋಗ, ವಿವಾಹ ಸೇರಿದಂತೆ ಅನೇಕ ವಂಚನೆಗಳಿಗೆ ಒಳಗಾಗುವ ಯುವ ಜನತೆಗೆ ಬೇಸಿಕ್ ಮಾಹಿತಿ ಇಲ್ಲದೇ ಇರುವುದೇ ಇದಕ್ಕೆ ಕಾರಣವಾಗಿದೆ. ಇ-ಮೇಲ್, ಹಾಗೂ ವಾಟ್ಸ್ ಆಫ್ ಮೊಬೈಲ್ ನಂಬರ್ಗೆ ಬರುವ ಅನವಶ್ಯಕ ಲಿಂಕ್ ಒತ್ತುವ ಮೂಲಕ ತಮ್ಮವೈಯಕ್ತಿಕ ಮಾಹಿತಿ ನೀಡುವುದರಿಂದ ವಂಚನೆಗಳು ಹೆಚ್ಚಾಗುತ್ತಿವೆ ಎಂದರು.
ಅನ್ಯ ನಂಬರ್ಗಳಿಂದ ವಂಚಕರು ಆಶ್ಲೀಲ ವಿಡಿಯೋ ಕರೆಗಳ ಮೂಲಕ ಮಾತನಾಡಿ, ರೆಕಾರ್ಡ್ ಮಾಡಿ ಮಾನಸಿಕವಾಗಿ ಕುಗ್ಗಿಸಿ, ವಂಚನೆ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೆರಗಳನ್ನು ಕಟ್ ಮಾಡಬೇಕು. ವಂಚನೆಗೆ ಒಳಗಾದ ತಕ್ಷಣ ಉಚಿತ ದೂರವಾಣಿ ಸಂಖ್ಯೆ. 1930 ಸಂಪರ್ಕಿಸುವಂತೆ ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಬೇಕು. ವೈಯಕ್ತಿಕ ಮಾಹಿತಿ, ಒಟಿಪಿ, ಬ್ಯಾಂಕ್ ವಿವರ ಮತ್ತಿತರ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ಜಾಲತಾಣ ಅಥವಾ ಇ-ಮೇಲ್ ಪಾಸ್ವರ್ಡಳನ್ನು ಆಟೋ ಸೇವ್ ಮಾಡಬೇಡಿ, ಆಗಾಗ ಪೊರ್ಗೆಟ್ ಪಾಸ್ವರ್ಡ್ ಮೂಲಕ ಪಾಸ್ವರ್ಡಳನ್ನು ರೀಸೆಟ್ ಮಾಡುವುದರ ಮೂಲಕ ಮತ್ತು ವಿಶಿಷ್ಟ ಚಿಹ್ನೆ ಮತ್ತು ಅಂಕಿಗಳನ್ನು ಒಳಗೊಂಡ ಸ್ಟ್ರಾಂಗ್ ಪಾಸ್ವರ್ಡ್ ನೀಡುವುದರಿಂದ ಜಾಲತಾಣಗಳ ವಂಚನೆಯಿಂದ
ಸುರಕ್ಷಿತವಾಗಿರಬಹುದು. ಸಾರ್ವಜನಿಕ ವೈಪೈ ಮತ್ತು ಚಾರ್ಜಿಂಗ್ ಬಳಸಬಾರದು ಎಂದರು.
ಆಧುನಿಕ ಬುದ್ದಿಮತ್ತೆ ಎಐ ಬಗ್ಗೆ ಜಾಗೃತರಾಗಬೇಕು, ಎಐ ಸಂಬಂಧಿತ ಅಪಾಯಗಳನ್ನು ಪ್ರತಿಯೊಬ್ಬರಿಗೂ ಸಂಪೂರ್ಣವಾಗಿ ಅರಿತುಕೊಳ್ಳಬೇಕು.
ಯುಪಿಐ ಪೇಮೆಂಟ್ ಪಾವತಿಸುವಾಗ ಹಣ ವರ್ಗಾಯಿಸುವ ಸಂಖ್ಯೆ ಮತ್ತು ಲಿಂಕ್ ಅಧಿಕೃತವಾಗಿ ಖಚಿತ ಪಡಿಸಿಕೊಳ್ಳಿ. ತಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡಳಿವೆ ಪರಿಶೀಲಿಸಿ ತಾವುಗಳು ಬಳಸದೇ ಇರುವ ಸಿಮ್ ಕಾರ್ಡಳನ್ನು ಕಡಿತಗೊಳಿಸಬೇಕು ಹಾಗೂ ಬ್ಲೂಟೂತ್, ಫೋನ್, ಕಂಪ್ಯೂಟರ್ ಇಂತಹ ಇಲೆಕ್ಟ್ರಾನಿಕ್ ಉಪಕರಣಗಳನ್ನು ಹಾಳಾದ ನಂತರ ಎಲ್ಲೆಂದರಲ್ಲಿ ಎಸೆಯಬೇಡಿ ಇವುಗಳಲ್ಲಿ ಡೇಟಾ ಸಂಗ್ರಹಣೆಯಾಗಿರುತ್ತದೆ, ಅವುಗಳು ಡೇಟಾ ನಾಶಪಡಿಸಬೇಕು ಎಂದರು.
ಜಿಲ್ಲಾ ಮಾಹಿತಿ ಕೇಂದ್ರದ ಅಧಿಕಾರಿ ಸಾಯಿ ಸಾಗರ ಜಲ್ಲು ಮಾತನಾಡಿ, ಸುರಕ್ಷಿತ ಅಂತರ್ಜಾಲದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರು, ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬಿಬ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.
