ಸುದ್ದಿ ಕನ್ನಡ ವಾರ್ತೆ
ಹಳಿಯಾಳ : ತಾಲೂಕಿನ ಅರ್ಲವಾಡ ಗ್ರಾಮದಲ್ಲಿರುವ ದಕ್ಷಿಣ ಭಾರತದ ಏಕೈಕ ಪುರಾತನ ಪ್ರಸಿದ್ಧ ದೇವಸ್ಥಾನ ಶ್ರೀ ಸೂರ್ಯನಾರಾಯಣರ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಬುಧವಾರ ಉತ್ತರ ಕನ್ನಡ ಜಿಲ್ಲೆಯ ಜನಪ್ರಿಯ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪಾಲ್ಗೊಂಡು ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.
ಈ ವೇಳೆ ಮಾತನಾಡಿದ ಅವರು ನನ್ನ ಈ ಲೋಕಸಭಾ ಕ್ಷೇತ್ರ ಹಾಗೂ ಹಳಿಯಾಳ ವಿಧಾನಸಭಾ ಕ್ಷೇತ್ರದಲ್ಲಿ 13ನೇ ಶತಮಾನದಲ್ಲಿ ಸ್ಥಾಪಿತವಾದ ಈ ಒಂದು ಪುರಾತನ ಪ್ರಸಿದ್ಧ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದು ನನ್ನ ಈ ಜನ್ಮದ ಪುಣ್ಯ. ಸ್ಥಳೀಯ ಗ್ರಾಮಸ್ಥರ ಹಾಗೂ ನಾಯಕರ ಸಹಕಾರದೊಂದಿಗೆ ಬರುವ ಮುಂದಿನ ದಿನಗಳಲ್ಲಿ ದೇವಸ್ಥಾನವನ್ನು ಇನ್ನೂ ಹೆಚ್ಚು ಅಭಿವೃದ್ಧಿಪಡಿಸಿ ದೇಶ ಹಾಗೂ ರಾಜ್ಯದಲ್ಲಿಯೇ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವನ್ನಾಗಿಸಲು ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಸಂಸದರೊಂದಿಗೆ ಮಾನ್ಯ ಮಾಜಿ ವಿಧಾನ ಪರಿಷತ್ ಸದಸ್ಯರು, ಕೆಡಿಸಿಸಿ ಬ್ಯಾಂಕಿನ ಹಾಲಿ ನಿರ್ದೇಶಕರಾದ ಶ್ರೀ ಎಸ್.ಎಲ್ ಘೋಟ್ನೇಕರ ಹಾಗೂ ಮಾಜಿ ಶಾಸಕರಾದ ಶ್ರೀ ಸುನೀಲ್ ಹೆಗಡೆ ಅವರು ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ದೇವಸ್ಥಾನ ಟ್ರಸ್ಟ್ ಕಮೀಟಿ ಹಾಗೂ ಸ್ಥಳೀಯ ಗ್ರಾಮಸ್ಥರಿಂದ ಸಂಸದರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವಾಜಿ ನರಸಾನಿ, ಜಿಲ್ಲಾ ವಿಶೇಷ ಆಹ್ವಾನಿತರಾದ ಮಂಗೇಶ ದೇಶಪಾಂಡೆ, ಅನಿಲ್ ಮುತ್ನಾಳೆ, ಮಂಡಲ ಅಧ್ಯಕ್ಷರಾದ ವಿಠ್ಠಲ ಸಿದ್ದನ್ನವರ, ಪ್ರಮುಖರಾದ ತುಕಾರಾಮ ಗೌಡಾ, ವಿಜಯ ಬೋಬಾಟಿ, ಮೊದಲಾದ ಗುರು ಹಿರಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
