ಸುದ್ಧಿಕನ್ನಡ ವಾರ್ತೆ
Goa: ಗೋವಾದ ಸತ್ತರಿ ತಾಲೂಕಿನಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ ದಾಖಲೆ ನಿರ್ಮಿಸಿರುವುದು ಸ್ಪಷ್ಟವಾಗಿದೆ. ಸದ್ಯ ಈ ತಾಲೂಕಿನಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ 40.000 ಕ್ಕೆ ತಲುಪಿದೆ.ಗೋವಾ ರಾಜ್ಯಾದ್ಯಂತ ಬಿಜೆಪಿಯು ಸದಸ್ಯತ್ವ ಅಭಿಯಾನಕ್ಕೆ ಒತ್ತು ನೀಡಿದ್ದು, ರಾಜ್ಯದಲ್ಲಿ ಬಿಜೆಪಿಯ ಸದಸ್ಯತ್ವ ಹೆಚ್ಚಿಸಿಕೊಳ್ಳಲು ಅಭಿಯಾನವನ್ನು ಚುರುಕುಗೊಳಿಸಿದೆ.

ಬಿಜೆಪಿ ಹಮ್ಮಿಕೊಂಡಿರುವ ಸದಸ್ಯತ್ವ ಅಭಿಯಾನಕ್ಕೆ ಗೋವಾ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಗೋವಾದ ವಾಳಪೈ ಕ್ಷೇತ್ರದಲ್ಲಿ 20,000 ಗಡಿ ದಾಟಿದೆ, ಪರ್ಯೆ ಕ್ಷೇತ್ರದಲ್ಲಿ 18,374, ಮುರಗಾಂವನಲ್ಲಿಯೂ ಬಿಜೆಪಿ ಸದಸ್ಯತ್ವ ಸಂಖ್ಯೆ 23,000 ಕ್ಕೆ ತಲುಪಿದೆ, ಬಿಚೋಲಿ ತಾಲೂಕಿನಲ್ಲಿ ಸದಸ್ಯತ್ವ ಸಂಖ್ಯೆ 32,000 ಗಡಿ ದಾಟಿದೆ ಎಂಬ ಮಾಹಿತಿ ಲಭ್ಯವಾಗಿದೆ.