ಸುದ್ದಿ ಕನ್ನಡ ವಾರ್ತೆ

ಯಳಂದೂರು:ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಮತ್ತೆ ಮೂರು ಕೆಪಿಎಸ್ ಶಾಲೆಗಳು ಮಂಜೂರು ಮಾಡುವಂತೆ ಮನವಿ ಮಾಡಲಾಗಿದ್ದು ಶಿಕ್ಷಣ ಸಚಿವ ಮಧು ಬಂಗಾರಪ್ಪರವರು ಇದಕ್ಕೆ ಅನುಮತಿ ನೀಡುವ ಭರವಸೆ ಇದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.

ಅವರು ಶನಿವಾರ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ವತಿಯಿಂದ ಹಮ್ಮಿಕೊಂಡಿದ್ದ ಮೂರನೇ ವರ್ಷದ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಥಮ ಹಂತವಾಗಿ ಇಲ್ಲಿಗೆ ಮುರು ಕೆಪಿಎಸ್ ಶಾಲೆಗಳು ಮಂಜೂರಾಗಿತ್ತು. ನಂತರ ಮೂರು ಶಾಲೆಗಳು ಮಂಜೂರಾಗಿವೆ. ಇದರೊಂದಿಗೆ ಮತ್ತೆ ಮೂರು ಶಾಲೆಗಳನ್ನು ನಾನು ಕೇಳಿದ್ದೇನೆ. ಇದಕ್ಕೆ ಸಚಿವರು ಒಪ್ಪಿಗೆ ನೀಡುವ ಭರವಸೆ ಇದೆ. ಇದರಿಂದ ಬಡ ಮಕ್ಕಳಿಗೂ ಖಾಸಗಿ ಶಾಲೆಯಲ್ಲಿ ಸಿಗುವ ಗುಣಮಟ್ಟದ ಶಿಕ್ಷಣ ಲಭಿಸುತ್ತದೆ. ಪೋಷಕರು ಕೆಪಿಎಸ್ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಲು ಉತ್ಸುಕರಾಗುತ್ತಾರೆ ಎಂದರು.

ಈಗಾಗಲೇ ಇಲ್ಲಿನ ಆದರ್ಶ ಶಾಲೆಯ ವಿದ್ಯಾರ್ಥಿನಿಯರು ಗಂಡು ಕಲೆಯಾದ ಕಂಸಾಳೆ ನೃತ್ಯವನ್ನು ಅಹಮದಾಬಾದ್‌ನಲ್ಲಿ ನಡೆದ ರಾಷ್ಟಿçÃಯ ಜಾನಪದ ನೃತ್ಯದಲ್ಲಿ ಪ್ರದರ್ಶನ ನೀಡಿ ಬಹುಮಾನ ಪಡೆದಿದ್ದಾರೆ. ಇದೇ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ರಾಷ್ಟç ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಸರ್ಕಾರಿ ಶಾಲೆಗಳಲ್ಲಿರುವ ಮಕ್ಕಳೂ ಪ್ರತಿಭಾವಂತರಿದ್ದು ಅವರಿಗೆ ಅವಕಾಶವನ್ನು ಕೊಡಿಸುವ ಹೊಣೆಯನ್ನು ಶಿಕ್ಷಕರು ಹೊರಬೇಕು. ಶಾಲೆಯ ಫಲಿತಾಂಶವನ್ನು ಉತ್ತಮಗೊಳಿಸಲು ಪ್ರಯತ್ನಿಸಬೇಕು ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಸರ್ಕಾರಿ ಶಾಲೆಯ ಮಕ್ಕಳ ಅಂಕ ಗಳಿಕೆ ಹೆಚ್ಚಬೇಕು, ಇದಕ್ಕೆ ಶಿಕ್ಷಕರು ಅಹರ್ನಿಶಿ ದುಡಿಯಬೇಕು ಎಂದರು.

 

ನಂತರ ವೇದಿಕೆ ಕಾರ್ಯಕ್ರಮಧಲ್ಲಿ ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್, ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಕಿನಕಹಳ್ಳಿ ಪ್ರಭುಪ್ರಸಾದ್, ಬಿಇಒ ಮಾರಯ್ಯ, ಕೆಪಿಎಸ್ ಶಾಲೆಯ ಉಪಪ್ರಾಂಶುಪಾಲ ನಂಜುAಡಯ್ಯ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅಮ್ಮನಪುರ ಮಹೇಶ್, ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಕೆಸ್ತೂರು ಸಿದ್ಧರಾಜು, ಬಿಳಿಗಿರಿರಂಗನಾಥಸ್ವಾಮಿ ದೇಗುಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜೆ. ಶ್ರೀನಿವಾಸ್, ವಜ್ರಮುನಿ, ರೇವಣ್ಣ, ಮಹಾದೇವ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ವರದಿ ಎಸ್.ಪುಟ್ಟಸ್ವಾಮಿಹೊನ್ನೂರು ಚಾಮರಾಜನಗರ ಜಿಲ್ಲೆ