ಸುದ್ದಿ ಕನ್ನಡ ವಾರ್ತೆ
ಬೆಂಗಳೂರು : ರಾಜ್ಯದಲ್ಲಿ ನಾಳೆ (ಫೆ.28)ಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಮಾ.17ರ ವರೆಗೆ ಪರೀಕ್ಷೆ ನಡೆಯಲಿದೆ.
ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಪರೀಕ್ಷೆನಡೆಯಲಿದ್ದು, 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿಜ್ಞಾನ ವಿಭಾಗದಲ್ಲಿ 2,92,645 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,11,174, ಕಲಾ ವಿಭಾಗದಲ್ಲಿ 1,42,982 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಪರೀಕ್ಷೆಯು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ನಡೆಯಲಿದ್ದು, ಪೇಪರ್ ಸೋರಿಕೆ ಆಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಲಾಗಿದೆ.
ಎಲ್ಲಾ ಪರೀಕ್ಷಾ ಕೊಠಡಿಗಳಲ್ಲೂ ಸಿಸಿ ಕ್ಯಾಮರಾ ಕಣ್ಣಾವಲು ಮತ್ತು ಜಿಲ್ಲಾ ಕೇಂದ್ರದಲ್ಲಿ ಯಾವುದೇ ಕೇಂದ್ರದ ಯಾವುದೇ ಕೊಠಡಿ ವ್ಯವಸ್ಥೆಯನ್ನು ವೀಕ್ಷಿಸಬಹುದಾದ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫೆ.28ರಿಂದ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಯಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಕಂಪ್ಯೂಟರ್ ಶಾಪ್ ಮುಚ್ಚಲು ಕ್ರಮ ಕೈಗೊಳ್ಳಲಾಗಿದೆ. ಸುಳ್ಳು ಸುದ್ದಿ ಹರಡುವ ಬಗ್ಗೆ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ಪೊಲೀಸ್ ಇಲಾಖೆ ನೇತೃತ್ವದಲ್ಲಿ ವಿಶೇಷ ತಂಡದ ರಚನೆ ಮಾಡಲಾಗಿದೆ. ಇಡೀ ಪರೀಕ್ಷಾ ವ್ಯವಸ್ಥೆ ಮೇಲ್ವಿಚಾರಣೆ ಮಾಡಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ, ಪ್ರತಿ ಜಿಲ್ಲೆ ಡಿಸಿಗಳು, ಎಸ್ಪಿಗಳು ಮಾನಿಟರ್ ಮಾಡಲು ವ್ಯವಸ್ಥೆ.
ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿಗಳಿಗೆ, ಅಧಿಕಾರಿಗಳಿಗೆ ಸಂಪೂರ್ಣ ಫೋನ್ ನಿಷೇಧ. ಪರೀಕ್ಷಾ ಕೇಂದ್ರಗಳಿಗೆ ವಾಚ್ ಸೇರಿ ಎಲೆಕ್ಟ್ರಾನಿಕ್ ಉಪಕರಣಗಳು ನಿಷೇಧಿಸಲಾಗಿದೆ.
ಫೆಬ್ರವರಿ 28- ಕನ್ನಡ, ಅರೇಬಿಕ್
ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ.
ಮಾರ್ಚ್ 3- ಇಂಗ್ಲಿಷ್
ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ,
ಉರ್ದು, ಸಂಸ್ಕೃತ, ಫ್ರೆಂಚ್.
ಮಾರ್ಚ್ 5- ಇತಿಹಾಸ
ಮಾರ್ಚ್ 6– ಭೌತಶಾಸ್ತ್ರ
ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,
ಭೂಗರ್ಭ ಶಾಸ್ತ್ರ
ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10- ಅರ್ಥಶಾಸ್ತ್ರ
ಮಾರ್ಚ್ 11- ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
12-ಹಿಂದಿ.
ಮಾರ್ಚ್ 13- ರಾಜ್ಯಶಾಸ್ತ್ರ
ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16-ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ.
ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ
