Banner Ad

ಸುದ್ದಿ ಕನ್ನಡ ವಾರ್ತೆ

ಕೋಲ್ಕತ್ತ:ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ಭಾನುವಾರ ನಡೆದ ಪುರುಷರ ಟಿ20 ವಿಶ್ವಕಪ್ 2026ರ ಸೂಪರ್-8 ಹಂತದ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್‌ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತ ಸೆಮಿಫೈನಲ್‌ಗೆ ಅಧಿಕೃತವಾಗಿ ಲಗ್ಗೆ ಇಟ್ಟಿದೆ.

Banner Ad

ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡವು ತನ್ನ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿ ಬೃಹತ್ ಮೊತ್ತವನ್ನು ಕಲೆಹಾಕಿ ಟೀಮ್ ಇಂಡಿಯಾ ಗೆಲುವಿಗೆ ವೆಸ್ಟ್ ಇಂಡೀಸ್ ತಂಡ 196 ರನ್‌ಗಳ ಕಠಿಣ ಗುರಿ ನೀಡಿತ್ತು. ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ಸಂಜು ಸ್ಯಾಟ್ಸನ್‌ ಅಜೇಯ 97 ರನ್ ಗಳಿಸಿ ಬಲ ತುಂಬಿದರು. ಅವರಿಗೆ ತಿಲಕ್ ವರ್ಮಾ (27 ರನ್) ಮತ್ತು ಹಾರ್ದಿಕ್ ಪಾಂಡ್ಯ (17 ರನ್) ಬೆಂಬಲಿಸಿದರು. ತಂಡವು 19.2 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 199 ರನ್ ಗಳಿಸಿತು.

ಮಾರ್ಚ್ 5ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್‌ನಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈಗಾಗಲೇ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಸೆಮಿಫೈನಲ್ ತಲುಪಿವೆ. ಮೊದಲ ಸೆಮಿಫೈನಲ್ ಮಾರ್ಚ್ 4ರಂದು ಕೋಲ್ಕತ್ತಾದಲ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ.

Banner Ad