ಸುದ್ದಿ ಕನ್ನಡ ವಾರ್ತೆ
ಮುಂಬೈ:ಇಲ್ಲಿನ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಟಿ20 ವಿಶ್ವಕಪ್‌ನ ಎರಡನೇ ಹೈ-ವೋಲ್ವೇಜ್ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 7 ರನ್‌ಗಳಿಂದ ಸೋಲಿಸುವ ಮೂಲಕ ಭಾರತ ತಂಡವು, 2026ರ ಟಿ20 ವಿಶ್ವಕಪ್‌ನ ಫೈನಲ್‌ಗೆ ಪ್ರವೇಶಿಸಿದೆ.
ಈ ಗೆಲುವಿನೊಂದಿಗೆ ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.
ಟಿ20 ವಿಶ್ವಕಪ್ ಇತಿಹಾಸದ 10 ಆವೃತ್ತಿಗಳಲ್ಲಿ ಭಾರತಕ್ಕೆ ಇದು ನಾಲ್ಕನೇ ಫೈನಲ್ ಪ್ರವೇಶವಾಗಿದೆ. ಈ ಹಿಂದೆ 2007 ಮತ್ತು 2024ರಲ್ಲಿ ಚಾಂಪಿಯನ್ ಆಗಿದ್ದ ಭಾರತ, 2014ರಲ್ಲಿ ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.ಬೃಹತ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಪರ ಜೇಕಬ್ ಬೆಥೆಲ್ (48 ಎಸೆತಗಳಲ್ಲಿ 105) ಸ್ಫೋಟಕ ಶತಕ ಸಿಡಿಸಿ ಭಾರತಕ್ಕೆ ನಡುಕ ತಂದರು. ಅವರು ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು ಪಂದ್ಯವನ್ನು ಕೊನೆಯವರೆಗೂ ಕೊಂಡೊಯ್ದರು.ಅಕ್ಷರ ಪಟೇಲ್ ಅವರ ಅದ್ಭುತ ಫೀಲ್ಡಿಂಗ್ ಹಾಗೂ ಬುಮ್ರಾ ಅವರ ಕರಾರುವಾಕ್ ಬೌಲಿಂಗ್ ಇಂಗ್ಲೆಂಡ್ ವೇಗಕ್ಕೆ ಬ್ರೇಕ್ ಹಾಕಿತು. ಅಂತಿಮವಾಗಿ ಇಂಗ್ಲೆಂಡ್ 20 ಓವರ್‌ಗಳಲ್ಲಿ 246/7 ರನ್ ಗಳಿಸಿ ಸೋಲೊಪ್ಪಿಕೊಂಡಿತು.
ಸಂಕ್ಷಿಪ್ತ ಸ್ಕೋರ್‌ಗಳು: ಭಾರತ 20 ಓವರ್‌ಗಳಲ್ಲಿ 253/7 (ಸಂಜು ಸ್ಯಾಟ್ಸನ್ 89, ಶಿವಂ ದುಬೆ 43; ವಿಲ್ ಜ್ಯಾಕ್ಸ್ 2/40)
ಇಂಗ್ಲೆಂಡ್ 20 ಓವರ್‌ಗಳಲ್ಲಿ 246/7 (ಜಾಕೋಬ್ ಬೆಥೆಲ್ 105; ಜಸ್ಟ್ರೀತ್ ಬುಮ್ರಾ 2/33) ಇಂಗ್ಲೆಂಡಿಗೆ ಏಳು ರನ್‌ಗಳಿಂದ ಸೋಲು.
