ಸುದ್ದಿ ಕನ್ನಡ ವಾರ್ತೆ
ಸಮತೋಲಿತ ಮತ್ತು ದೂರದೃಷ್ಟಿಯ ಬಜೆಟ್ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಮಂಡಿಸಿದ್ದಾರೆ. ದಾಖಲೆಯ ತಮ್ಮ 17ನೇ ಬಜೆಟ್ ಮಂಡನೆಯ ಮೂಲಕ ತಮ್ಮ ಆರ್ಥಿಕ ಜ್ಞಾನ ಮತ್ತು ಆಡಳಿತ ಅನುಭವವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.ಎಂದು ಶಾಸಕರು ಆಡಳಿತ ಸುಧಾರಣೆ ಸಮಿತಿ ಅಧ್ಯಕ್ಷರು ಆದ ಆರ್ ವಿ ದೇಶಪಾಂಡೆ ಹೇಳಿದ್ದಾರೆ .
ಈ ಬಜೆಟ್ ದೂರದೃಷ್ಟಿಯೊಂದಿಗೆ ರೂಪುಗೊಂಡಿದ್ದು,ಆರ್ಥಿಕ ಶಿಸ್ತನ್ನು ಕಾಯ್ದುಕೊಂಡು ರಾಜ್ಯದ ಎಲ್ಲಾ ವರ್ಗದ ಜನರು, ಎಲ್ಲಾ ಪ್ರದೇಶಗಳು ಹಾಗೂ ವಿವಿಧ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮಂಡಿಸಲಾಗಿದೆ. ವಿಶೇಷವಾಗಿ ಆರೋಗ್ಯ, ಶಿಕ್ಷಣ, ಕೃಷಿ, ಜಲಸಂಪನ್ಮೂಲ ಮತ್ತು ಪ್ರವಾಸೋದ್ಯಮದ ಮೂಲಕ ಉದ್ಯೋಗ ಸೃಷ್ಟಿ ಸೇರಿದಂತೆ ಪ್ರಮುಖ ಮೂಲಭೂತ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಲಿದೆ.
ಬಜೆಟನಲ್ಲಿ ಮುಖ್ಯವಾಗಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸೂಪರ ಸ್ಪೇಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ರೂ. 100.00 ಕೋಟಿ ಅನುದಾನ ಮೀಸಲಿಟ್ಟಿದ್ದು, ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನದ ಕನಸು ನನಸಾಗಿದೆ. ಜೊತೆಗೆ ಮಾಜಿ ಕುಸ್ತಿಪಟುಗಳಿಗೆ ಮಾಶಾಸನವನ್ನು ಹೆಚ್ಚಿಸಿದ್ದು, ಅವರ ಜೀವನೋಪಯಕ್ಕಾಗಿ ಸಹಾಯವಾಗಲಿದೆ.
ಇದು ಸಮತೋಲಿತ ಹಾಗೂ ಜನಪರ ಬಜೆಟ್ ಆಗಿದ್ದು, ಸರ್ವತೋಮುಖ ಅಭಿವೃದ್ಧಿಯ ದಿಕ್ಕಿನಲ್ಲಿ ರಾಜ್ಯವನ್ನು ಮುನ್ನಡೆಸುವ ದೃಢ ಬದ್ಧತೆಯನ್ನು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಮತ್ತೊಮ್ಮೆ ತೋರಿಸಿದ್ದಾರೆ.
ಈ ಜನಪರ ಮತ್ತು ಅಭಿವೃದ್ಧಿಮುಖಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು
ಆರ್.ವಿ.ದೇಶಪಾಂಡೆ ಹೇಳಿಕೆ ನೀಡಿದ್ದಾರೆ
