ಸುದ್ದಿ ಕನ್ನಡ ವಾರ್ತೆ
ಜೋಯಿಡಾ ತಾಲೂಕಿನ ಅಕೇತಿ ಗ್ರಾಮ ಪಂಚಾಯತ ವ್ಯಾಪ್ತಿಯ ಪೆರೆಗಾಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ರಾಧಾಕೃಷ್ಣ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಇಂದು ಮಾಜಿ ಶಾಸಕರಾದ ಸನ್ಮಾನ್ಯ ಶ್ರೀ ಸುನಿಲ್ ಹೆಗಡೆಯವರು ಪಾಲ್ಗೊಂಡಿದ್ದರು.
ದೇವಸ್ಥಾನ ಟ್ರಸ್ಟ್ ಕಮಿಟಿ ವತಿಯಿಂದ ಮಾಜಿ ಶಾಸಕರಿಗೆ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜೋಯಿಡಾ ಮಂಡಲ ಅಧ್ಯಕ್ಷರಾದ ಶಿವಾಜಿ ಗೋಸಾವಿ, ಪ್ರಧಾನ ಕಾರ್ಯದರ್ಶಿ ಗಿರೀಶ್ ಗೋಸಾವಿ, ಗುರಪ್ಪ ಹಣಬರ, ಸಂತೋಷ್ ವೇಲಿಪ, ಗ್ರಾಮ ಪಂಚಾಯತ್ ಸದಸ್ಯರಾದ ಅಪ್ಪು ಪವಾರ್, ದೇವಸ್ಥಾನ ಟ್ರಸ್ಟ್ ಕಮಿಟಿ ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
