ಸುದ್ಧಿಕನ್ನಡ ವಾರ್ತೆ
Goa: ಗೋವಾದಲ್ಲಿ ವಾಹನಗಳ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದನ್ನು ನಿಯಂತ್ರಿಸುವುದರ ಜೊತೆಗೆ ವಾಹನ ಸವಾರರ ಸುರಕ್ಷತಾ ದೃಷ್ಠಿಯಿಂದ ಗೋವಾದಲ್ಲಿ “ನೊ ಹೆಲ್ಮೆಟ್ ನೋ ಪೆಟ್ರೋಲ್” (No helmet no petrol) ನೀತಿ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಉತ್ತರ ಗೋವಾದಲ್ಲಿ ರಸ್ತೆ ಸುರಕ್ಷತಾ ಸಪ್ತಾಹದ ಸಂದರ್ಭದಲ್ಲಿ “ನೋ ಹೆಲ್ಮೆಟ್ ನೋ ಪೆಟ್ರೋಲ್” ನೀತಿಯನ್ನು ಜಾರಿಗೊಳಿಸಲು ಜಿಲ್ಲಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಅಕ್ಟೋಬರ್ 14 ರಿಂದ ಗೋವಾದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಆರಂಭಗೊಂಡಿದ್ದು, ಮುಖ್ಯಂತ್ರಿ ಪ್ರಮೋದ ಸಾವಂತ್ ರಸ್ತೆ ಸುರಕ್ಷತಾ ಸಪ್ತಾಹವನ್ನು ಉಧ್ಘಾಟಿಸಿದ್ದಾರೆ. ( Chief Minister Pramoda Sawant inaugurated the Road Safety Week) ರಸ್ತೆ ಸುರಕ್ಷತೆಯ ಬಗ್ಗೆ ಜನತೆಯಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. ಹೆಲ್ಮೆಟ್ ಧರಿಸದೆಯೇ ಬೈಕ್ ಓಡಿಸುವವರಿಗೆ ದಂಡ ವಿಧಿಸಲಾಗುತ್ತಿದೆ. ಹೆಲ್ಮೆಟ್ ಧರಿಸದಿದ್ದರೆ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ನೀಡಬಾರದು ಎಂದು ಉತ್ತರ ಗೋವಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಈ ಆದೇಶದ ಪ್ರತಿಯನ್ನು ಹಿಂದೂಸ್ತಾನ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಕಂಪನಿಯ ಮುಖ್ಯ ವ್ಯವಸ್ಥಾಪಕರಿಗೆ ಕಳುಹಿಸಿದ್ದಾರೆ. ಎಲ್ಲ ಪೆಟ್ರೋಲ್ ಬಂಕ್ ಗಳಲ್ಲಿ “ನೋ ಹೆಲ್ಮೆಟ್ ನೋ ಪೆಟ್ರೋಲ್” ಎಂಬ ನಾಮ ಫಲಕ ಹಾಕುವುದು ಖಡ್ಡಾಯವಾಗಿದೆ.( “No Helmet No Petrol” signboard is mandatory at all petrol stations.)
ಕೆಲ ರಾಜ್ಯಗಳ ಕೆಲವು ಜಿಲ್ಲೆಗಳಲ್ಲಿ “ನೊ ಹೆಲ್ಮೆಟ್ ನೊ ಪೆಟ್ರೋಲ್” ನೀತಿ ಜಾರಿಯಾಗುತ್ತಿಲ್ಲ. ಕಾನೂನು ಪ್ರಕಾರ ಬೈಕ್ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯ. ಹೀಗಾಗಿ ನೋ ಹೆಲ್ಮೆಟ್, ನೋ ಪೆಟ್ರೋಲ್ ನೀತಿಯನ್ನು ಜಾರಿಗೆ ತರಲು ಯಾವುದೇ ತೊಂದರೆ ಇಲ್ಲ ಎಂದು ಅಖಿಲ ಗೋವಾ ಪೆಟ್ರೋಲ್ ಮಾಲೀಕರ ಸಂಘದ ಅಧ್ಯಕ್ಷ ನರಹರ್ ಠಾಕೂರ್ ಅಭಿಪ್ರಾಯಪಟ್ಟಿದ್ದಾರೆ.