Banner Ad

ಸುದ್ದಿ ಕನ್ನಡ ವಾರ್ತೆ

ಯಲ್ಲಾಪುರ: ತಾಲೂಕಿನ ಅರಬೈಲ್‌ ಘಟ್ಟದಲ್ಲಿ ಲಾರಿಯೊಂದು ಬ್ರೇಕ್ ಫೇಲ್ ಆಗಿ ಎರಡು ಲಾರಿಗಳಿಗೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಶಿರಲೆ ಕ್ರಾಸ್ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದ ಘಟನೆ ವರದಿಯಾಗಿದೆ.

Banner Ad

ಮುಂಜಾನೆಯ ಸಮಯದಲ್ಲಿ ಯಲ್ಲಾಪುರದಿಂದ ಅರಬೈಲ್ ಮಾರ್ಗವಾಗಿ ಅಂಕೋಲಾ ಕಡೆಗೆ ಸಾಗುತ್ತಿದ್ದ ಟ್ಯಾಂಕ‌ರ್, ಘಟ್ಟದ ಅಪಾಯಕಾರಿ ತಿರುವಿನಲ್ಲಿ ಏಕಾಏಕಿ ನಿಯಂತ್ರಣ ತಪ್ಪಿದೆ.ಟ್ಯಾಂಕರ್‌ನ ಬ್ರೇಕ್ ವೈಫಲ್ಯಗೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಈ ವೇಳೆ ಎದುರು ದಿಕ್ಕಿನಿಂದ ಬರುತ್ತಿದ್ದ ಟ್ರಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಈ ಡಿಕ್ಕಿಯ ರಭಸಕ್ಕೆ ಹಿಂದಿನಿಂದ ಬರುತ್ತಿದ್ದ ಇನ್ನೂ ಕೆಲವು ವಾಹನಗಳು ಕೂಡ ಪರಸ್ಪರ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಘಟನೆಯಿಂದಾಗಿ ಕೆಲ ಸಮಯ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು.ಸ್ಥಳಕ್ಕಾಗಮಿಸಿದ ಪೋಲಿಸರು ಲಾರಿಗಳನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

Banner Ad