ಸುದ್ದಿ ಕನ್ನಡ ವಾರ್ತೆ

ದಾಂಡೇಲಿ: ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರ 79ನೇ ಜನ್ಮ ದಿನಾಚರಣೆಯ ನಿಮಿತ್ತ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯ ಒಳ ರೋಗಿಗಳಿಗೆ ಸೋಮವಾರ ಹಣ್ಣು ಹಂಪಲನ್ನು ವಿತರಿಸಲಾಯಿತು.

ಇದಕ್ಕೂ ಮುನ್ನ ಕೇಕ್ ಕತ್ತರಿಸಿ ಸಿಹಿಯನ್ನು ಹಂಚಿ ಆರ್.ವಿ. ದೇಶಪಾಂಡೆ ಯವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ ಅವರು, ನಾಡು ಕಂಡ ಶ್ರೇಷ್ಠ ರಾಜಕಾರಣಿ ಆರ್.ವಿ. ದೇಶಪಾಂಡೆ ಯವರು ತಮ್ಮ ಸುಧೀರ್ಘ ರಾಜಕಾರಣದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ತಮ್ಮನ್ನು ತಾವು ಅತ್ಯಂತ ಪ್ರಾಮಾಣಿಕವಾಗಿ, ಬದ್ಧತೆಯಿಂದ ತೊಡಗಿಸಿಕೊಂಡಿದ್ದಾರೆ. ದಾಂಡೇಲಿಯ ಸಮಗ್ರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು, ನೂರಾರು ಕೋಟಿ ರೂಪಾಯಿ ಅನುದಾನ ತಂದಿರುವುದನ್ನು ಯಾರು ಮರೆಯುವಂತಿಲ್ಲ. ಭಗವಂತನು ಅವರಿಗೆ ಇನ್ನಷ್ಟು ಆಯುಷ್ಯ, ಆರೋಗ್ಯ ದಯಪಾಲಿಸಲಿ ಎಂದರು
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಪಿ. ನಾಯ್ಕ, ಕೆಪಿಸಿಸಿ ಸದಸ್ಯ ಕರೀಂ‌ ಅಜ್ರೇಕರ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಬಶೀರ್ ಗಿರಿಯಾಲ ಮತ್ತು ಅಡಿವೆಪ್ಪ ಭದ್ರಕಾಳಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೀರ್ತಿ ಗಾಂವಕರ, ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ರಿಯಾಜ್ ಬಾಬು ಸೈಯದ್, ಅನೀಲ್ ದಂಡಗಲ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಬಂದಂ, ನಗರ ಸಭೆ ಮಾಜಿ ಅಧ್ಯಕ್ಷೆ ಯಾಸ್ಮಿನ್ ಕಿತ್ತೂರ್, ದಾಫೀರ್ ನದಿಮುಲ್ಲಾ, ರಾಮಲಿಂಗ ಜಾಧವ, ಶಿಲ್ಪಾ ಕೊಡೆ, ಆಫ್ರೀನ್ ಕಿತ್ತೂರ್ ಹಾಗೂ ಕಿರಿಯ ಮುಖಂಡರು, ಮಾಜಿ ನಗರಸಭಾ ಸದಸ್ಯರು, ಪಕ್ಷದ ಕಾರ್ಯಕರ್ತರು ಇದ್ದರು