Banner Ad

ಸುದ್ದಿ ಕನ್ನಡ ವಾರ್ತೆ

ಶಿರಸಿ:ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರ ನಿರ್ದೇಶನದಂತೆ ಜಿಲ್ಲಾಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಬಳಿಕ ಇಡೀ ಜಿಲ್ಲೆಯನ್ನು ಸುತ್ತಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದೇನೆ ಎಂದು ಜೆಡಿಎಸ್‌ ನೂತನ ಜಿಲ್ಲಾಧ್ಯಕ್ಷ ಸೂರಜ್ ನಾಯ್ಕ ಸೋನಿ ತಿಳಿಸಿದ್ದಾರೆ.

Banner Ad

ಶಿರಸಿ ನಗರದ ನೆಮ್ಮದಿ ರಂಗಮಂದಿರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ ನಾಲ್ಕು ಕ್ಷೇತ್ರಗಳಲ್ಲಿ ಗೆಲ್ಲುವ ಸಾಮರ್ಥ್ಯ ಜೆಡಿಎಸ್‌ ಪಕ್ಷಕ್ಕಿದೆ. ಕಾರ್ಯಕರ್ತರ ಬಲ ಮತ್ತು ಜನಬೆಂಬಲ ನಮ್ಮೊಂದಿಗೆ ಇದೆ” ಎಂದು ವಿಶ್ವಾಸ ಕ್ತಪಡಿಸಿದರು. “ನಾನೂ ಕೂಡಾ ಆಕಾಂಕ್ಷಿಯಾಗಿದ್ದರೂ, ಪಕ್ಷದ ವರಿಷ್ಠರ ನಿರ್ಧಾರಕ್ಕೆ ಬದ್ದನಾಗಿದ್ದೇನೆ. ಪಕ್ಷದ ಸಂಘಟನೆ ಬಲಪಡಿಸುವುದೇ ನನ್ನ ಪ್ರಾಥಮಿಕ ಗುರಿ” ಎಂದು ಹೇಳಿದರು.

ಮುಂದಿನ
ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕುಮಾರಣ್ಣನ ನಿರ್ದೇಶನದಂತೆ ಹಳ್ಳಿ – ಹಳ್ಳಿಗಳಲ್ಲಿ ಪಕ್ಷದ ಸಂಘಟನೆ ಗ್ರಾಮ ಮಟ್ಟದಿಂದ ಪಕ್ಷವನ್ನು ಬಲಪಡಿಸುವ ಕಾರ್ಯ ನಡೆಯುತ್ತಿದೆ. ಯುವಕರು ಹಾಗೂ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದತ್ತ ಸೆಳೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್‌ ಮುಖಂಡ ಉಪೇಂದ್ರ ಪೈ ಸೇರಿದಂತೆ ಇತರರು ಉಪಸ್ಥಿತರಿದ್ದರು.

Banner Ad