Banner Ad

ಸುದ್ದಿ ಕನ್ನಡ ವಾರ್ತೆ
ನವದೆಹಲಿ: ಭಾರತೀಯ ರಾಜಕೀಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಚುನಾಯಿತ ಸರ್ಕಾರವೊಂದರ ಮುಖ್ಯಸ್ಥರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ.

ಈ ಮೂಲಕ ಪ್ರಧಾನಿ ಮೋದಿ, ಸಿಕ್ಕಿಂ ಮುಖ್ಯಮಂತ್ರಿಯಾಗಿ 8,930 ದಿನಗಳ ಕಾಲ ಅಧಿಕಾರದಲ್ಲಿದ್ದ ಪವನಕುಮಾರ ಚಾಮಿಂಗ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಗುಜರಾತ ಮುಖ್ಯಮಂತ್ರಿಯಾಗಿ ಮತ್ತು ದೇಶದ ಪ್ರಧಾನಮಂತ್ರಿಯಾಗಿ ಅವರ ಒಟ್ಟು ಅಧಿಕಾರಾವಧಿ ಈಗ 8,930 ದಿನಗಳನ್ನು ಪೂರೈಸಿದ್ದು, ಅವರು ನಾಯಕತ್ವದ ಪಾತ್ರದಲ್ಲಿ 25ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ದಶಕಗಳ ಕಾಲ ಸತತವಾಗಿ ಸಾರ್ವಜನಿಕ ಸೇವೆ ಮತ್ತು ಉನ್ನತ ಮಟ್ಟದ ರಾಜಕೀಯ ನಾಯಕತ್ವವನ್ನು
ಪ್ರತಿಬಿಂಬಿಸುವ ಈ ಸಾಧನೆಯನ್ನು ಅಪರೂಪದ ಮತ್ತು ಮಹತ್ವದ ಮೈಲಿಗಲ್ಲು ಎಂದು ಪರಿಗಣಿಸಲಾಗಿದೆ.

Banner Ad

ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಪ್ರಧಾನಿ ಮೋದಿ ಅವರು ಹಲವು ಗಮನಾರ್ಹ ದಾಖಲೆಗಳನ್ನು ನಿರ್ಮಿಸಿದ್ದಾರೆ. ಅವರು ಗುಜರಾತ್‌ನಲ್ಲಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಯಾಗಿದ್ದಾರೆ ಹಾಗೂ ಸುದೀರ್ಘ ಅನುಭವ ಹೊಂದಿರುವ ಸ್ವಾತಂತ್ರ್ಯಾನಂತರ ಜನಿಸಿದ ಭಾರತದ ಮೊದಲ ಪ್ರಧಾನ ಮಂತ್ರಿ ఎంబ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2014, 2019 ಮತ್ತು 2024ರ ಲೋಕಸಭಾ ಚುನಾವಣೆಗಳಲ್ಲಿ ಸತತ ಮೂರು ಬಾರಿ ಜಯಗಳಿಸುವ ಮೂಲಕ ತಮ್ಮ ರಾಜಕೀಯ ಚಾಣಾಕ್ಷತೆಯನ್ನು ಸಾಬೀತುಪಡಿಸಿದ್ದಾರೆ.

Banner Ad