ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ರಾಮನಗರ ಗ್ರಾಮ ಪಂಚಾಯತ ವ್ಯಾಪ್ತಿಯ ರಾಮನಗರ 20 ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯಲ್ಲಿ ದಿನಾಂಕ:25-03-2026 ರ ಬುಧವಾರ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟಿ, ಉಪಕೇಂದ್ರ ರಾಮನಗರ, ವಿ.ಆರ್.ದೇಶಪಾಂಡೆ ಮೇಮೋರಿಯಲ್ ಟ್ರಸ್ಟ್,ರುಡಸೆಟ್ ನ ವತಿಯಿಂದ,ಎಮ್ ಎಮ್ ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಹುಬ್ಬಳ್ಳಿ ಇವರ ಸಹಯೋಗದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ,ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ. ಸಾರ್ವಜನಿಕರು ಈ ಶಿಬಿರದ ಲಾಭ ಪಡೆದುಕೊಳ್ಳುವಂತೆ ಸಂಘಟಕರು ವಿನಂತಿಸಿಕೊಂಡಿದ್ದಾರೆ.