ಸುದ್ದಿ ಕನ್ನಡ ವಾರ್ತೆ
ಬೆಂಗಳೂರು: ಮಕ್ಕಳನ್ನು ಶಾಲೆಗೆ
ಸೇರಿಸಲು ಉಂಟಾಗಿರುವ ವಯಸ್ಸಿನ ಗೊಂದಲ ರಾಜ್ಯ ಸರ್ಕಾರ ನಿವಾರಿಸಿದೆ. 1ನೇ ತರಗತಿ ಪ್ರವೇಶಕ್ಕೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ ಈ ವರ್ಷವೂ ಸಡಿಲಿಕೆ ಮಾಡಲಾಗುತ್ತದೆ ಎಂದು ಅಧಿವೇಶನದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಜೂನ್ 1ಕ್ಕೆ ಮಗುವಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮಕ್ಕೆ ಈ ಬಾರಿ 60 ದಿನಗಳ ಅಂದರೆ 2 ತಿಂಗಳ ರಿಯಾಯಿತಿ ನೀಡಲಾಗಿದೆ. ಇದರಿಂದ ನಿಗದಿತ ದಿನಾಂಕಕ್ಕೆ ಎರಡು ತಿಂಗಳು ಬಾಕಿ ಇರುವ ಮಕ್ಕಳಿಗೂ 1ನೇ ತರಗತಿಗೆ ಪ್ರವೇಶ ಪಡೆಯಲು ಅವಕಾಶ ಸಿಗಲಿದೆ ಎಂದು ಅವರು ಹೇಳಿದ್ದಾರೆ. ಕರ್ನಾಟಕ ಶಿಕ್ಷಣ ಕಾಯ್ದೆ 1993ರ ಅನ್ವಯ, ಪೋಷಕರ ಹಿತದೃಷ್ಟಿಯಿಂದ 2026-27ನೇ ಸಾಲಿಗೆ ಈ ವಿನಾಯಿತಿ ಅನ್ವಯವಾಗಲಿದೆ. ಜತೆಗೆ ಶಾಲಾ ದಾಖಲಾತಿಗಾಗಿ ಬಳಸುವ ಸಾಫ್ಟ್ವೇರ್ನಲ್ಲಿ ಈ ಬದಲಾವಣೆಯನ್ನು ತಕ್ಷಣವೇ ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಕೆಲವು ವರ್ಷಗಳಿಂದ ವಯಸ್ಸಿನ ಮಿತಿಯ ವಿಚಾರವಾಗಿ ಪಾಲಕರಲ್ಲಿ ಆತಂಕ ಮನೆ ಮಾಡಿದೆ. ಹಲವು ಮಕ್ಕಳ ವಯಸ್ಸು ಜೂನ್ಗೆ ಕೇವಲ ಕೆಲವು ದಿನಗಳ ಅಂತರದಲ್ಲಿ 6 ವರ್ಷಕ್ಕೆ ಕಡಿಮೆ ಇರುತ್ತದೆ. ಇದರಿ೦ದ ಮಕ್ಕಳ ಒಂದು ವರ್ಷ ವ್ಯರ್ಥವಾಗುತ್ತದೆ ಎಂಬ ದೂರುಗಳು ಕೇಳಿಬರುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಸರ್ಕಾರ ವಯಸ್ಸಿನ ಮಿರಿಯನ್ನು ಮತ್ತೊಮ್ಮೆ ಸಡಿಲಿಸಿದೆ ಎಂದು ಹೇಳಿದ್ದಾರೆ.
