ಸುದ್ದಿ ಕನ್ನಡ ವಾರ್ತೆ
ಜೊಯಿಡಾ:ನಮ್ಮ ಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಅತ್ಯಂತ ಜನಪ್ರಿಯ ಹಾಗೂ ಸ್ಫೂರ್ತಿದಾಯಕ ಕಾರ್ಯಕ್ರಮ ‘ಮನ್ ಕೀ ಬಾತ್’ ಅನ್ನು ಇಂದು ಶಿರಸಿ ತಾಲೂಕಿನ ಯಡಳ್ಳಿ ಶಕ್ತಿ ಕೇಂದ್ರದ ಹಿಪನಳ್ಳಿ ಬೂತ್ ಸಂಖ್ಯೆ 116ರ ಶ್ರೀ ರಾಮನಾಥ ಹೆಗಡೆ (ರಾಮಣ್ಣ) ಅವರ ಮನೆಯಲ್ಲಿ ಗೌರವಾನ್ವಿತ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾರ್ಯಕರ್ತರೊಂದಿಗೆ ಸೇರಿ ಕಾರ್ಯಕ್ರಮವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
