Banner Ad

ಜೋಯಿಡಾ: ತಾಲೂಕಿನ ಅಣಶಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ ಹಾಗೂ ಅರಣ್ಯ ಇಲಾಖೆ ಹಾಗೂ ಎಲ್ಲಾ ಇಲಾಖೆ ವತಿಯಿಂದ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಣಶಿ ಗ್ರಾಮ ಪಂಚಾಯತ ಕಾರ್ಯದರ್ಶಿ ಲಕ್ಷ್ಮಣ ಬರ್ಸೇಕರ ಶಾಸಕರಾದ ಆರ್ ವಿ ದೇಶಪಾಂಡೆ ಮತ್ತು ತಾಲೂಕು ಪಂಚಾಯತ ಮತ್ತು ತಾಲೂಕಾಡಳಿತ ಅಧಿಕಾರಿಗಳ ಮಾರ್ಗದರ್ಶನದಂತೆ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಗುತ್ತಿದೆ. ನಮ್ಮ ಗ್ರಾಮವನ್ನು ಸ್ವಚ್ಚವಾಗಿಡುವುದು ನಮ್ಮ ಕರ್ತವ್ಯ, ಎಲ್ಲರೂ ಸ್ವಚ್ಚತೆಗೆ ಹೆಚ್ಚಿನ ಆಧ್ಯತೆ ನೀಡಬೇಕು, ಅಣಶಿ ಇದು ಸುಂದರವಾದ ಗ್ರಾಮ,ಇಲ್ಲಿನ ಪರಿಸರ ಸದಾ ಹಸಿರಾಗಿರುತ್ತದೆ,ಪ್ಲಾಸ್ಟಿಕ್ ಕಸವನ್ನು ಚೆಲ್ಲಿ ಹಸಿರನ್ನು ಹಾಳು ಮಾಡುವ ಕೆಲಸ ಯಾರು ಮಾಡಬೇಡಿ ಎಂದರು.

Banner Ad

ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಆಡಳಿತಾಧಿಕಾರಿ ನಿಂಗಪ್ಪ ಗಚ್ಚಿನಮನೆ, NRLM ನ ವಿನಂತಿ ದೇಸಾಯಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಗ್ರಾಮಸ್ಥರು ಇದ್ದರು.

Banner Ad