ಸುದ್ದಿ ಕನ್ನಡ ವಾರ್ತೆ

ಬೆಂಗಳೂರು:ಬಂಗಾಲಕೊಲ್ಲಿ ಮತ್ತು ಅರಬ್ಬಿ ಸಮುದ್ರದ ಹವಾಮಾನ ವೈಪರಿತ್ಯದ ಪರಿಣಾಮ ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ, ಗಾಳಿ ಹಾಗೂ ಗುಡುಗು ಮಿಂಚಿನ ಮುನ್ಸೂಚನೆ ನೀಡಲಾಗಿದೆ.
ಬಂಗಾಲಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಹವಾಮಾನ ವೈಪರಿತ್ಯ ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬಂಗಾಲಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಪ್ರತ್ಯಾವರ್ತ ಮಾರುತಗಳು ರಾಜ್ಯದ ವಾತಾವರಣದಲ್ಲಿ ಅಸ್ಥಿರತೆ ಉಂಟುಮಾಡಿವೆ. ಇದರ ಪರಿಣಾಮವಾಗಿ ವಾಯುಭಾರ ಕುಸಿತ ನಿರ್ಮಾಣವಾಗಿ ಮಳೆಯ ಸಾಧ್ಯತೆ ಹೆಚ್ಚಾಗಿದೆ.

ಈಗಾಗಲೇ ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಿದೆ. ಇದರ ಜೊತೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಹಗುರ ಮಳೆಯ ಅನುಭವವಾಗಿದೆ.