ಸುದ್ಧಿಕನ್ನಡ ವಾರ್ತೆ
ಬೆಂಗಳೂರು: ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ರವರ ತಾಯಿ ಸರೋಜಾ ಸಂಜೀವ ರವರು ಚಿಕಿತ್ಸೆ ಫಲಕಾರಿಯಾಗದೆಯೇ ನಿಧನರಾಗಿದ್ದಾರೆ.ಅವರನ್ನು ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.(Actor Kichcha Sudeep’s mother Saroja Sanjeeva passed away ).

ನಟ ಸುದೀಪ್ ಸೇರಿದಂತೆ ಮೂವರು ಮಕ್ಕಳನ್ನು ತಾಯಿ ಸರೋಜಾ ರವರು ಅಗಲಿದ್ದಾರೆ. ಭಾನುವಾರ ಮಧ್ಯಾನ್ಹ ಬೆಂಗಳೂರಿನ ಜೆಪಿ ನಗರದಲ್ಲಿರುವ ಅವರ ನಿವಾಸದಲ್ಲಿ ಸರೋಜಾ ರವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದ್ದು ಸಂಜೆ ಅಂತ್ಯಕ್ರಿಯೆ ನೆರವೇರಲಿದೆ.