ಸುದ್ದಿ ಕನ್ನಡ ವಾರ್ತೆ
17 ಕಳ್ಳತನ ಪ್ರಕರಣಗಳನ್ನು ಭೇದಿಸಿ ವಸ್ತುಗಳನ್ನು ಮಾಲೀಕರಿಗೆ ಹಸ್ತಾಂತರಿಸಿದ ಪೋಲೀಸರ ಬಗ್ಗೆ ಮೆಚ್ಚುಗೆ.
ಶಿರಸಿ ಉಪವಿಭಾಗದ ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಕರಣಗಳಲ್ಲಿ ಕಳ್ಳತನವಾದ ಸ್ವತ್ತುಗಳನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ದೀಪನ್ ಎಂ ಶನಿವಾರ ಮಾಲಿಕರಿಗೆ ಹಸ್ತಾಂತರಿಸಿದರು.
ನಗರದ ಗುರುಸಿದ್ದೇಶ್ವರ ಸಾಂಸ್ಕೃತಿಕ ಭವನ ಬಣ್ಣದ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಉಪವಿಭಾಗದ ಶಿರಸಿ ನಗರ ಠಾಣೆ, ಮಾರುಕಟ್ಟೆ ಠಾಣೆ, ಬನವಾಸಿ ಠಾಣೆ, ಗ್ರಾಮೀಣ ಠಾಣೆ, ಮುಂಡಗೋಡ ಹಾಗೂ ಯಲ್ಲಾಪುರ ಮತ್ತು ಸಿದ್ದಾಪುರ ಠಾಣೆಗಳಲ್ಲಿ ಕಳುವಾದ ಸ್ವತ್ತುಗಳನ್ನು ಪತ್ತೆ ಹಚ್ಚಿ ಮಾಲೀಕರಿಗೆ ನೀಡಲಾಯಿತು.
ಡಿವೈಎಸ್ಪಿ ಗೀತಾ ಪಾಟೀಲ್ ಸೇರಿದಂತೆ ಪೊಲೀಸ್ ಇಲಾಖೆಯ ಪ್ರಮುಖ ಅಧಿಕಾರಿಗಳು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
