ಸುದ್ದಿ ಕನ್ನಡ ವಾರ್ತೆ
ಶಿರಸಿ : ಮಾರ್ಕೆಟ್ ಠಾಣೆ ಪೋಲಿಸರು ಮಿಂಚಿನ ಕಾರ್ಯಾಚರಣೆಯಿಂದ ಕೊಲೆ ನಡೆಸಿ ಕೇವಲ 24 ಗಂಟೆಯಲ್ಲಿ ಕದ್ದ ಆಭರಣ ಮತ್ತು ನಗದು ಸಮೇತವಾಗಿ ಆರೋಪಿಯನ್ನು ಬಂಧಿಸಿದ್ದಾರೆ. ಕೊಲೆ ಆರೋಪಿಯು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಮಂಜುನಾಥ ಲಿಂಗಯ್ಯ ನಾಯ್ಕ (70) ಎಂದು ಗುರುತಿಸಲಾಗಿದ್ದು, ಈತ ನಗರದ ಕೆ ಎಚ್ ಬಿ ಕಾಲೋನಿಯ ಹೊಸ ಬಡಾವಣೆಯಲ್ಲಿರುವ ಡಾಕ್ಟರ್ ರಮೇಶ್ ಕಲಘುಟಕರ್ ಅವರನ್ನು ಲಟ್ಟಣಿಗೆಯಿಂದ ತಲೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿರುವ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಲೆಗೆ ಬಳಸಿದ ಲಟ್ಟಣಿಗೆ ಮತ್ತು 15 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮತ್ತು 50 ಸಾವಿರ ನಗದು ವಶಕ್ಕೆ ಪಡೆದಿರುವ ಪೋಲಿಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಎಸ್‌ಪಿ ದೀಪನ್ ಎಂ ಎನ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಚರಣೆಯಲ್ಲಿ ಡಿವೈಎಸ್‌ ಪಿ ಗೀತಾ ಪಾಟೀಲ, ಸಿಪಿಐ ಶಶಿಕಾಂತ ವರ್ಮಾ,ಮಾರ್ಕೆಟ್ ಯಾರ್ಡ್ ಪಿಎಸ್‌ಐ ಬಸವರಾಜ್ ಕನಶೆಟ್ಟಿ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.