ಸುದ್ದಿ ಕನ್ನಡ ವಾರ್ತೆ
ಹಳಿಯಾಳ: ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗದ ಹಾದಿ ತೋರುವ ನಿಟ್ಟಿನಲ್ಲಿ, ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯು 2026ರ ಮೇ ತಿಂಗಳ ಕೊನೆಯ ವಾರದಲ್ಲಿ ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.

ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು 18 ರಿಂದ 45 ವರ್ಷ ವಯೋಮಿತಿಯೊಳಗಿರಬೇಕು.

ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಸಂಸ್ಥೆಯೇ ಒದಗಿಸಲಿದೆ. ತರಬೇತಿಯಲ್ಲಿ ಮೊಬೈಲ್ ಫೋನ್‌ಗಳ ಹಾರ್ಡ್‌ವೇರ್, ಸಾಫ್ಟ್‌ವೇ‌ರ್ ರಿಪೇರಿ, ದೋಷ ಪತ್ತೆ ಹಾಗೂ ಸಣ್ಣ ಉದ್ಯಮ ಆರಂಭಿಸುವ ಕುರಿತು ಪ್ರಾಯೋಗಿಕ ಮಾಹಿತಿ ನೀಡಲಾಗುತ್ತದೆ. ತರಬೇತಿ ಪೂರ್ಣಗೊಂಡ ನಂತರ ಸ್ವಂತ ಉದ್ಯೋಗ ಆರಂಭಿಸಲು ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯ ಪಡೆಯಲು ಮಾರ್ಗದರ್ಶನ ನೀಡಲಾಗುವುದು.
ಆಸಕ್ತರು ಬಿಳಿ ಹಾಳೆಯ ಮೇಲೆ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯನ್ನು ಬರೆದು, ಅದನ್ನು ಫೋಟೋ ತೆಗೆದು ಕೆಳಗಿನ ವಾಟ್ಸಾಪ್ ಸಂಖ್ಯೆಗೆ ಕಳುಹಿಸಬಹುದು ಅಥವಾ ಕರೆ ಮಾಡಿ ಹೆಸರು ನೋಂದಾಯಿಸಬಹುದು. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.

https://forms.gle/m4pcmpritDevbwug9, ವೆಬ್ ಸೈಟ್ www.rsetihaliyal. orgಸಂಪರ್ಕ ಸಂಖ್ಯೆ: 8970145354, 9483485489. ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಂಪರ್ಕಿಸಲು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಗ್ರಾಮೀಣ ಭಾಗದ ಯುವಕರು ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳುವಂತೆ ಕೋರಲಾಗಿದೆ.