ಸುದ್ದಿ ಕನ್ನಡ ವಾರ್ತೆ

. ಬನವಾಸಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿ, ಚಾಲಕನಿಗೆ ಸಣ್ಣಪುಟ್ಟ ಗಾಯವಾದ ಘಟನೆ ಶಿರಸಿ-ಬನವಾಸಿ ರಸ್ತೆಯ ಕಾಂಗ್ರೆಸ್ ಕಚೇರಿಯ ಬಳಿ ಭಾನುವಾರ ಸಂಜೆ ನಡೆದಿದೆ.

ಬನವಾಸಿಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಮೂವರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಚಾಲಕನಿಗೆ ಸಣ್ಣ ಪ್ರಮಾಣದ ಗಾಯವಾಗಿದ್ದು ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯರು 108 ಕರೆ ಮಾಡಿ ಅಂಬುಲೆನ್ಸ್‌ನಲ್ಲಿ ಕಳುಹಿಸುವ ಮೂಲಕ ಶಿರಸಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡವರು ಶಿರಸಿ ನಗರದ ಗುಡ್ಡದಮನೆ ನಿವಾಸಿಗಳಾಗಿದ್ದು ಭಾಸ್ಕರ ಪಿ.(63) ಹಾಗೂ ಮಹೇಶ್ ಗುಡ್ಡದಮನೆ(54) ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬನವಾಸಿ ಪೊಲೀಸ್ ಠಾಣೆಯ ಪಿಎಸ್‌ಐ ಮಾಂತೇಶ ಕುಂಬಾರ ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.