ಸುದ್ದಿ ಕನ್ನಡ ವಾರ್ತೆ

. ಕಾರವಾರ: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮೇ 18ರಂದು ಭಾರಿ ಗಾಳಿ ಹಾಗೂ ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮಿನುಗಾರರು ಸಮುದ್ರದಲ್ಲಿ ಅಲೆಗಳು ತೀವ್ರತೆ ಇರುವುದರಿಂದ ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮಳೆಯ ಜೊತೆಗೆ ಗಾಳಿ ಕೂಡಾ 40-60 ಕಿ.ಮೀ ವೇಗದಿಂದ ಬೀಸುವ ಸಾಧ್ಯತೆ ಇರುವುದರಿಂದ ಅಪಾಯಕಾರಿ ಮರಗಳಿರುವ ಮನೆಗಳಲ್ಲಿಯ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು ಮತ್ತು ಮರಗಳ ಕೆಳಗೆ ಆಶ್ರಯ ಪಡೆಯದಂತೆ ಸೂಚಿಸಲಾಗಿದೆ.

ತುರ್ತು ಸೇವೆಗೆ 24×7 ಕಂಟ್ರೋಲ್ ರೂಮ್ 08382-229857 ಮೊಬೈಲ್ ಸಂಖ್ಯೆ: 9483511015 ಸಂಪರ್ಕಿಸಲು ಅಪರ ಜಿಲ್ಲಾಧಿಕಾರಿ ಸಾಜೀದ್‌ ಮುಲ್ಲಾ ತಿಳಿಸಿದ್ದಾರೆ.