ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ: ತಾಲೂಕಿನ ರಾಷ್ಟೀಯ ಹೆದ್ದಾರಿ 52 ರ ಇಡಗುಂದಿಯಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ದೋಣಗಾರಿನ ಹರೀಶ ಭೂಪತಿ ಸಿದ್ದಿ (21) ಮೃತ ವ್ಯಕ್ತಿ. ಅಂಕೋಲಾ ಕಡೆಯಿಂದ ಯೆಲ್ಲಾಪುರ ಕಡೆಗೆ ಬರುತ್ತಿದ್ದ ಕಂಟೇನರ್ ಲಾರಿ ಎದುರಿಗೆ ಇದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಜಖಂಗೊಂಡಿದೆ. ಲಾರಿ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಈ ಕುರಿತು ಯೆಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
