ಸುದ್ಧಿಕನ್ನಡ ವಾರ್ತೆ
ಬೆಂಗಳೂರು: ಬೇಲೆಕೆರೆ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಶಾಸಕ ಸತೀಶ್ ಸೈಲ್ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ ತೀರ್ಪು ನೀಡಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಾಸಕ ಸೈಲ್-ನ್ಯಾಯಾಲಯದ ತೀರ್ಪಿಗೆ ಬದ್ಧ ಎಂದು ಹೇಳಿದ್ದಾರೆ.

ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಶಾಸಕ ಸೈಲ್ ದೋಷಿ ಎಂದು ತೀರ್ಪು ನೀಡಿದೆ. ಆದರೆ ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಕಾಯ್ದಿರಿಸಿದೆ. ಶಿಕ್ಷೆ ಪ್ರಮಾಣ ಪ್ರಕಟವಾಗದ ತನಕ ಬಂಧನಕ್ಕೆ ಒಪ್ಪಿಸದಂತೆ ಶಾಸಕ ಸೈಲ್ ಪರ ವಕೀಲರು ವಾದ ಮಂಡಿಸಿದ್ದರು. ಆದರೆ ತೀರ್ಪು ಪ್ರಕಟವಾಗಿದ್ದರಿಂದ ಇದಕ್ಕೆ ಅವಕಾಶವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಾಲಯದ ತೀರ್ಪಿನ ನಂತರ ಶಾಸಕ ಸೈಲ್ ರವರನ್ನು ಸಿಬಿಐ ಅಧಿಕಾರಿಗಳು ಕರೆದುಕೊಂಡು ಹೋಗುವ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಾಸಕ ಸೈಲ ನ್ಯಾಯಾಲಯವು ನೀಡಿದ ತೀರ್ಪಿಗೆ ಬದ್ಧ ಎಂದು ಹೇಳಿದ್ದಾರೆ.

2010 ರಲ್ಲಿ ನಡೆದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಲ್ಲಿ 6 ಪ್ರಕರಣಗಳು ದಾಖಲಾಗಿದ್ದವು. ಈ ಕುರಿತು ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅಂತಿ ತೀರ್ಪು ಹೊರಡಿಸಿದ್ದಾರೆ.