ಸುದ್ಧಿಕನ್ನಡ ವಾರ್ತೆ
ಶಾಸಕ ಸತೀಶ್ ಸೇರಿದಂತೆ ಒಟ್ಟೂ ಏಳು ಜನರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಪ್ಟ ಮಾಡಿದ್ದಾರೆ. ಬೋರಿಂಗ್ ಆಸ್ಪತ್ರೆಯಲ್ಲಿ ಜನರಲ್ ಚೆಕಪ್ ನಂತರ ಜೈಲಿಗೆ ಸಿಬಿಐ ಅಧಿಕಾರಿಗಳು ಕರೆತಂದಿದ್ದಾರೆ.

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಬಂಧನವಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ಪ್ರಕಟಿಸಿದೆ. 2009 ರ ಸಂದರ್ಭದಲ್ಲಿ ಬೇಲೆಕೇರಿಯಲ್ಲಿ ಸೀಜ್ ಮಾಡಿ ಇಟ್ಟಿದ್ದ ಅದಿರು ನಾಪತ್ತೆ ಪ್ರಕರಣದಲ್ಲಿ ಲೋಕಾಯುಕ್ತ ಸಂತೋಷ ಹೆಗಡೆ ಪ್ರಕರಣ ದಾಖಲಿಸಲು ಅರಣ್ಯ ಇಲಾಖೆಗೆ ಸೂಚಿಸಿದ್ದರು. ನಂತರ ಈ ಪ್ರಕರಣ ಸಿಬಿಐಗೆ ವರ್ಗಾವಣೆಯಾಗಿತ್ತು.

ಎಂಟೂವರೆ ಲಕ್ಷ ಟನ್ ಅದಿರು ಟನ್ ಅದಿರನ್ನು ಮಾರಾಟ ಮಾಡಿದ್ದಾರೆ ಎಂಬ ಆರೋಪ ಶಾಸಕ ಸತೀಶ ಸೈಲ್ ಮತ್ತಿತರರ ಮೇಲೆ ಇದೆ. ಇದೀಗ ಈ ಪ್ರಕರಣದಲ್ಲಿ ಸತೀಶ್ ಸೈಲ್ ರವರನ್ನು ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ ತೀರ್ಪು ನೀಡಿದೆ.